ನವದೆಹಲಿ:ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಕ್ರಮ ಕೈಗೊಳ್ಳಲು ನಮ್ಮಲ್ಲಿ ವಿವಿಧ ಉಪಾಯಗಳಿವೆ. ಅಲ್ಲದೆ ನಾವು ಎಲ್ಲದಕ್ಕೂ ತಯಾರಿದ್ದೇವೆ ಎಂದು ನೂತನ ಸೇನಾ ಮುಖ್ಯಸ್ಥ ಜನರಲ್​ ಮನೋಜ್​ ಮುಕುಂದ್​ ನರಾವಣೆ ತಿಳಿಸಿದ್ದಾರೆ.
ಖಾಸಗಿ ಚಾನಲ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ನರಾವಣೆ, ನಮ್ಮ ಸೇನಾ ಪಡೆಗಳನ್ನು ಜಮ್ಮು ಮತ್ತು ಕಾಶ್ಮೀರ ಸೇರಿ ಗಡಿಯಲ್ಲಿ ಈಗಾಗಲೇ ನಿಯೋಜಿಸಲಾಗಿದೆ. ಮತ್ತು ಅಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ನಮ್ಮಲ್ಲಿ ವಿವಿಧ ಯೋಜನೆಗಳಿವೆ. ಅಗತ್ಯವಿದ್ದರೆ, ಆ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬಹುದು. ನಾವು ಮಾಡಬೇಕಾದ ಯಾವುದೇ ಕೆಲಸವನ್ನು ನಾವು ಯಶಸ್ವಿಯಾಗಿ ನಿರ್ವಹಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಾಕಿಸ್ತಾನದ ಬಗ್ಗೆ ಕಠಿಣ ನಿಲುವು ಹೊಂದಿರುವ ನರಾವಣೆ, ಪರಿಸ್ಥಿತಿ ಬಂದರೆ ಭಯೋತ್ಪಾದನೆ ವಿರುದ್ಧ ಎಂತಹ ನೀತಿ ಅನುಸರಿಸಲು ನಾವು ಸಿದ್ಧ ಎಂದರು.
ಸದ್ಯಕ್ಕೆ, ಆಕ್ರಮಣಗಳು ಅಥವಾ ಒಳನುಸುಳುವಿಕೆಗಳು ನಡೆಯದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದ ನರಾವಣೆ, ನಾವು ವಿವಿಧ ಪ್ರದೇಶಗಳಲ್ಲಿ ಮತ್ತು ಸಂಕಷ್ಟದ ಪರಿಸ್ಥಿತಿಗಳಲ್ಲಿ ಹೆಚ್ಚಿನ ಜಾಗರೂಕರಾಗಿರಬೇಕು. ಇದು ನಮಗೆ ನಿಜವಾದ ಚಾಲೆಂಜ್​ ಎಂದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
