ದಿಸ್ಪುರ:ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್​ ಗೊಗೊಯ್​ (86) ಅವರು ಸೋಮವಾರ ನಿಧನರಾಗಿದ್ದಾರೆ. ಕರೊನಾ ಸೋಂಕಿಗೆ ತುತ್ತಾಗಿದ್ದ ಅವರಿಗೆ ಕರೊನಾದಿಂದ ಗುಣಮುಖರಾದ ನಂತರ ಅನೇಕ ರೀತಿಯ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಗುವಾಹಟಿಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ:ಸಾಲ ವಾಪಾಸು ಕೇಳಲು ಬಂದವಳನ್ನೇ ರೇಪ್​ ಮಾಡಿಬಿಟ್ಟ; ಸಾಲ ಕೇಳಿದರೆ ಹುಷಾರ್​!
ತರುಣ್​ ಅವರು ಬಹು ಅಂಗಾಂಗ ವೈಫಲ್ಯ ಕಾರಣದಿಂದಾಗಿ ಮೃತರಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸೋಮವಾರ ಸಂಜೆ 5.35ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್​ನ ಜನಪ್ರಿಯ ನಾಯಕರಾಗಿದ್ದ ಅವರು ಮೂರು ಬಾರಿ ಅಸ್ಸಾಂನ ಮುಖ್ಯಮಂತ್ರಿಯಾಗಿದ್ದ ಅಧಿಕಾರ ನಿರ್ವಹಿಸಿದ್ದರು. ಆರು ಬಾರಿ ಸಂಸದರಾಗಿಯೂ ಆಯ್ಕೆಯಾಗಿದ್ದರು. ರಾಜ್ಯದಲ್ಲಿ ಅತಿ ಹೆಚ್ಚು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಿದವರಾಗಿ ಹೆಸರಾಗಿದ್ದರು.
ಇದನ್ನೂ ಓದಿ:ದೇಶಕ್ಕೀಗ ಹದಿಹರೆಯ, ಸಾಧಿಸಬೇಕಾದ್ದು ಬಹಳಷ್ಟಿದೆ- ಸಂಸದರ ಫ್ಲ್ಯಾಟ್ ಕಟ್ಟಡ ಉದ್ಘಾಟಿಸಿ ಪ್ರಧಾನಿ
ಆಗಸ್ಟ್​ 25ರಂದು ತರುಣ್​ ಗೊಗೊಯ್​ ಅವರಿಗೆ ಕರೊನಾ ಸೋಂಕು ದೃಢವಾಗಿತ್ತು. ಎರಡು ತಿಂಗಳ ಸತತ ಚಿಕಿತ್ಸೆಯ ನಂತರ ಅಕ್ಟೋಬರ್​ 25ರಂದು ಕರೊನಾ ನೆಗಟಿವ್​ ವರದಿ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಮಾಡಲಾಗಿತ್ತು. ಅದಾದ ನಂತರ ಅನೇಕ ಸಮಸ್ಯೆಗಳು ಕಾಣಿಸಿಕೊಂಡಿದ್ದು, ನವೆಂಬರ್​ 2ರಂದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ರಾತ್ರಿಯಿಂದ ಅವರ ಆರೋಗ್ಯ ಹದಗೆಟ್ಟಿದ್ದಾಗಿ ತಿಳಿಸಲಾಗಿತ್ತು.
ಅಪ್ರಾಪ್ತೆ ಮೇಲೆ ಅತ್ಯಾಚಾರ ಸಾಧ್ಯವಾಗದ್ದಿದ್ದಕ್ಕೆ ಅವನೇನು ಮಾಡಿದ ಗೊತ್ತಾ? ಬೆಚ್ಚಿ ಬೀಳಿಸುತ್ತೆ ಈ ಕ್ರೈಂ ಸ್ಟೋರಿ

ಪಾಕ್​, ಬಾಂಗ್ಲಾ ಮತ್ತು ಭಾರತವನ್ನು ಸೇರಿಸಿ ಒಂದೇ ರಾಷ್ಟ್ರ ಮಾಡಬೇಕಂತೆ ಈ ಅಲ್ಪಸಂಖ್ಯಾತ ಸಚಿವರಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 8 =
Remember me
