ಪಣಜಿ:ತೆಹಲ್ಕಾ ಮ್ಯಾಗಜಿನ್​ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ ತರುಣ್​ ತೇಜ್​ಪಾಲ್​ ವಿರುದ್ಧ ಕೇಳಿಬಂದಿದ್ದ ಅತ್ಯಾಚಾರ ಆರೋಪದಿಂದ ಗೋವಾ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. ​
ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಗೋವಾ ಸೆಷನ್ಸ್ ಕೋರ್ಟ್ ಮೇ 21ಕ್ಕೆ ತೀರ್ಪು ಕಾಯ್ದಿರಿಸಿತ್ತು. ಸದ್ಯ ತೇಜ್​ಪಾಲ್​ ಜಾಮೀನಿನ ಮೇಲೆ ಹೊರಗಿದ್ದು, ಖುಲಾಸೆ ಆದೇಶದಿಂದ ಖುಷಿಪಟ್ಟಿದ್ದಾರೆ.
2013ರಲ್ಲಿ ಗೋವಾದ ಪಂಚತಾರಾ ರೆಸಾರ್ಟ್‌ನಲ್ಲಿ ನಡೆದ ಸಮ್ಮೇಳನದ ಸಮಯದಲ್ಲಿ ತಮ್ಮ ಮ್ಯಾಗಜಿನ್​ನ ಕಿರಿಯ ಸಹೋದ್ಯೋಗಿ ಮೇಲೆ ಲಿಫ್ಟ್​ನಲ್ಲಿ ಅತ್ಯಾಚಾರ ಎಸಗಿದ್ದ ಆರೋಪ ತೇಜ್​ಪಾಲ್​ ಮೇಲಿತ್ತು.
ತೇಜ್​ಪಾಲ್​ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ ನ್ಯಾಯಾಲಯ ತೇಜ್​ಪಾಲ್​ರನ್ನು ಬಂಧಿಸುವಂತೆ ಆದೇಶಿಸಿತ್ತು. ಈ ಪ್ರಕರಣದ ವಿರುದ್ಧ ತೇಜ್ ಪಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಆಗಸ್ಟ್ ನಲ್ಲಿ ಈ ಪ್ರಕರಣದ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ತೇಜ್ ಪಾಲ್ ಅರ್ಜಿ ವಜಾಗೊಳಿಸಿ, ಆರೋಪಗಳನ್ನು ಕೈ ಬಿಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಅಲ್ಲದೆ ಆರು ತಿಂಗಳೊಳಗೆ ಈ ಪ್ರಕರಣದ ವಿಚಾರಣೆ ಪೂರ್ಣಗೊಳಿಸುವಂತೆ ಗೋವಾ ಕೋರ್ಟ್ ಗೆ ಸೂಚಿಸಿತ್ತು.
ವಿವಾಹೇತರ ಸಂಬಂಧ ಬೆಳೆಸಿದ ಪೊಲೀಸ್​​ಗೆ ಇನ್​ಕ್ರಿಮೆಂಟ್ ಕಟ್ !

ವಯಸ್ಸಾದರೂ ಮದುವೆಯಾಗಿಲ್ಲವೆಂದು ಹೆತ್ತವರಿಂದಲೇ ಸಿನಿಮಾ ನಿರ್ದೇಶಕನ ಬರ್ಬರ ಹತ್ಯೆ- ದೇಹ ಪೀಸ್‌ ಪೀಸ್‌!

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಭಾರತೀಯ ಮೂಲದ ವಿದ್ಯಾರ್ಥಿನಿ ಆಯ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
