ಮುಂಬೈ:ಬಿಜೆಪಿ ಶಾಸಕರೊಬ್ಬರ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆ ಸೃಷ್ಟಿಸಿ ಮಹಿಳೆಯರಿಗೆ ಮೆಸೇಜ್​ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು 28 ವರ್ಷದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಥಾಣೆಯ ಕಲ್ಯಾಣ್​ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗಣಪತಿ ಗಾಯಕ್ವಾಡ್​ ನೀಡಿದ ದೂರಿನ ಮೇರೆಗೆ ಪೊಲೀಸರು 28 ವರ್ಷದ ಕ್ಯಾಬ್​ ಚಾಲಕ ಚಂದನ್​ ಶಿರ್ಸೆಕಾರ್​ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ: ಎಸ್‌ಇಪಿ ರಚನೆಗೆ ಸದ್ಯದಲ್ಲಿಯೇ ಕ್ರಮ, ಮುಂದಿನ ವರ್ಷ ನೀತಿ ಅನುಷ್ಠಾನಕ್ಕೆ ಸಿದ್ಧತೆ: ಸಚಿವ ಮಧು ಬಂಗಾರಪ್ಪ
ಈ ಕುರಿತು ಪ್ರತಿಕ್ರಿಯಿಸಿರುವ ಕೊಲ್ಸೆವಾಡಿ ಪೊಲೀಸ್​ ಠಾಣಾಧಿಕಾರಿ ದೇಶ್​ಮುಖ್​ ಥಾಣೆಯ ಕಲ್ಯಾಣ್ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಗಣಪತಿ ಗಾಯಕ್ವಾಡ್​ ಹೆಸರಿನಲ್ಲಿ ವೃತ್ತಿಯಲ್ಲಿ ಕ್ಯಾಬ್​ ಚಾಲಕನಾಗಿರುವ ಚಂದನ್​ ಶಿರ್ಸೆಕಾರ್​ ಎಂಬ ವ್ಯಕ್ತಿಯೂ ನಕಲಿ ಖಾತೆಯನ್ನು ಸೃಷ್ಟಿಸಿ ಮೆಸೇಜ್​ ಮಾಡುತ್ತಿರುತ್ತಾನೆ.
ಈ ಬಗ್ಗೆ ಶಾಸಕ ಗಣಪತಿ ಅವರನ್ನು ಭೇಟಿಯಾದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಖಾತೆಯಿಂದ ಮೆಸೇಜ್​ ಮಾಡಿರುವ ಕುರಿತು ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಶಾಸಕ ಪೊಲೀಸ್​ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ಕ್ಯಾಬ್​ ಚಾಲಕನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ವಿರುದ್ಧ ಭಾರತ ದಂಡ ಸಂಹಿತೆ(IPC Section) 499(ಮಾನನಷ್ಟ) ಸೇರಿದಂತೆ ಇತರೆ ಸಂಬಂಧಿತ ನಿಬಂದನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕೊಲ್ಸೆವಾಡಿ ಪೊಲೀಸ್​ ಠಾಣಾಧಿಕಾರಿ ದೇಶ್​ಮುಖ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
