ನವದೆಹಲಿ:ಜನರು ಕುಸಿದು ಬಿದ್ದು ಸಾವಿಗೀಡಾದ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿರುವುದರಿಂದ ಕಳೆದ ಕೆಲ ದಿನಗಳಿಂದ ಟ್ವಿಟರ್​ನಲ್ಲಿ ಹಾರ್ಟ್​ ಅಟ್ಯಾಕ್ ಟ್ರೆಂಡಿಂಗ್​ನಲ್ಲಿತ್ತು. ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. 23 ವರ್ಷದ ಶಿಕ್ಷಕನೊಬ್ಬ ಶಾಲೆಯಲ್ಲಿ ಪ್ರಾರ್ಥನೆ ಮಾಡಿಸುವ ವೇಳೆ ಕುಸಿದು ಬಿದ್ದಿದ್ದು, ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ಉತ್ತರಪ್ರದೇಶದ ಬರೇಲಿಯಲ್ಲಿ ಶನಿವಾರ ಈ ಪ್ರಕರಣ ನಡೆದಿದೆ. ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಭಾಷ್​ ನಗರದ ಜೆಕೆ ಸ್ಕೂಲ್ ಅಕಾಡೆಮಿ ಆವರಣದಲ್ಲಿ ಈ ಘಟನೆ ನಡೆದಿದೆ. ಗೋವಿಂದ್ ಎಂಬಾತ ಹೃದಯಾಘಾತದಿಂದ ಸಾವಿಗೀಡಾದ ಶಿಕ್ಷಕ.
ಶಾಲಾ ಮೈದಾನದಲ್ಲಿ ಮಕ್ಕಳಿಗೆ ಪ್ರಾರ್ಥನೆ ಮಾಡಿಸುವ ವೇಳೆ ಈತ ಕುಸಿದು ಬಿದ್ದಿದ್ದ. ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೆಡಿಕಲ್ ಕಾಲೇಜೊಂದಕ್ಕೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ.
ದೇಶದಲ್ಲಿ ಟ್ರೆಂಡಿಂಗ್​ನಲ್ಲಿದೆ ‘ಹಾರ್ಟ್ ಅಟ್ಯಾಕ್’; ಅದರ ಬಗ್ಗೆಯೇ ಮಾತಾಡುತ್ತಿದ್ದಾರೆ ಹಲವರು!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:6 + five =
Remember me
