ಲಖನೌ:ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಘಟನೆಯೂ ಉತ್ತರಪ್ರದೇಶದ ಮಿರ್ಜಾಪುರದ ಕತ್ರಾದಲ್ಲಿ ನಡೆದಿದ್ದು ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಐಟಿಐ ಕಾಲೇಜಿನ ಶಿಕ್ಷಕ ಒಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದು ಇದು ದುರದೃಷ್ಟಕರ ಸಂಗತಿ ಎಂದು ಬೇಸರವನ್ನು ಹೊರಹಾಕಿದ್ದಾರೆ.
ಅತ್ಯಾಚಾರಿ ಒಬ್ಬನನ್ನು ಆರಮಾಗಿ ಒಡಾಡಿಕೊಂಡು ಇರಲು ಬಿಟ್ಟಿರುವುದನ್ನು ನೋಡಿದರೆ ನಮ್ಮ ಸಮಾಜದ ಸ್ವಾಸ್ಥ್ಯ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ಈ ಘಟನೆಯೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ವರುಣಾದಲ್ಲಿ ಕಾಂಗ್ರೆಸ್​ನ ಹತಾಶ ಕೃತ್ಯಗಳಿಗೆ ಬಿಜೆಪಿ ಬಗ್ಗಲ್ಲ: ಅಶ್ವತ್ಥನಾರಾಯಣ
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂತೋಷ್​ ಮಿಶ್ರಾ ದೂರು ದಾಖಲಾದ 24 ಘಂಟೆಯೊಳಗೆ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಘಟನೆಯೂ ಹೋಳಿ ಹಬ್ಬದ ಸಂದರ್ಭದಲ್ಲಿ ನಡೆದಿದ್ದು ಬಣ್ಣ ಹಚ್ಚುವ ನೆಪದಲ್ಲಿ ಆರೋಪಿ ಶಿಕ್ಷಕ ವಿಜಯ್​ ಸಿಂಗ್​ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಟ್ವಿಟರ್​ನಲ್ಲಿ ವಿಡಿಯೋ ಶೇರ್​ ಮಾಡಿ ಮಾಹಿತಿ ನೀಡಿದ್ಧಾರೆ.
सोशल मीडिया पर स्कूली छात्रा के साथ गलत व्यवहार सम्बन्धित वॉयरल वीडियों का त्वरित संज्ञान लेते हुए सम्बन्धित आरोपी को गिरफ्तार कर नियमानुसार अग्रिम विधिक कार्यवाही की जा रही है।#SP_Mzp@IPS_SantoshMकी बाइट-#Mirzapur#UPPolicepic.twitter.com/Ph58X1LFQU
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
