ಹೈದರಾಬಾದ್​:ಲಾಕ್​ಡೌನ್​ ಅನೇಕ ವ್ಯವಸ್ಥೆಗಳನ್ನೇ ಬದಲಾಯಿಸಿಬಿಟ್ಟಿದೆ. ತರಗತಿ ಶಿಕ್ಷಣ ಹೋಗಿ ಆನ್​ಲೈನ್​ ಶಿಕ್ಷಣ ಬಂದಿದೆ. ಈ ರೀತಿ ಆನ್​ಲೈನ್​ ಶಿಕ್ಷಣ ಪಡೆಯಲು ಸಾಧ್ಯವಾಗದ ಮಕ್ಕಳಿಗೆ ಶಾಲೆಯಲ್ಲಿ ಪಾಠ ಮಾಡುವುದಾಗಿ ಹೇಳಿದ ಶಿಕ್ಷಕನೊಬ್ಬ ಐದರಿಂದ ಆರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಇದನ್ನೂ ಓದಿ:‘ನನ್ನ ಕಿಡ್ನಿ ಮಾರಾಟಕ್ಕಿದೆ!’ ವಿಚಿತ್ರ ಜಾಹೀರಾತಿನ ಹಿಂದಿದೆ ನೋವಿನ ಕಥೆ
40 ವರ್ಷದ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಪಾಠ ಹೇಳಿಕೊಡುವುದಾಗಿ ಅವರನ್ನು ಶಾಲೆಗೆ ಕರೆಸಿಕೊಳ್ಳುತ್ತಿದ್ದ. ಕರೊನಾ ಕಾರಣ ಕೊಟ್ಟು ಒಬ್ಬೊಬ್ಬರನ್ನೇ ಕರೆಸಿಕೊಳ್ಳುತ್ತಿದ್ದ. ಹೀಗೆ ಒಬ್ಬಂಟಿಯಾಗಿ ಬಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ, ಅವರ ಮೇಲೆ ಅತ್ಯಾಚಾರವೆಸಗುತ್ತಿದ್ದ. ಆ ವಿಚಾರವನ್ನು ಯಾರಿಗೂ ಹೇಳದಂತೆ ಎಚ್ಚರಿಕೆ ನೀಡುತ್ತಿದ್ದ.
ಇತ್ತಿಚೆಗೆ ಶಾಲೆಗೆ ಹೋಗಿ ಬಂದ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯಕ್ಕೀಡಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವ ವಿಚಾರ ತಿಳಿದುಬಂದಿದೆ. ನಂತರ ಬಾಲಕಿಯನ್ನು ವಿಚಾರಿಸಿದಾಗ ಆಕೆ, ಶಿಕ್ಷಕನೇ ಆ ರೀತಿ ಮಾಡಿದ್ದಾಗಿ ಬಾಯಿಬಿಟ್ಟಿದ್ದಾಳೆ.
ಇದನ್ನೂ ಓದಿ:ಅಪ್ಪ ಜೈಲಿನಲ್ಲಿ, ಅಮ್ಮ ಇನ್ನೆಲ್ಲೋ! ನಾಯಿ ಜತೆ ರಸ್ತೆಗೆ ಬಿದ್ದ ಬಾಲಕನ ಮನಕಲಕುವ ಕಥೆ
ವಿಚಾರ ತಿಳಿಯುತ್ತಿದ್ದಂತೆ, ಬಾಲಕಿಯ ತಂದೆ ತಾಯಿ ಮತ್ತು ಗ್ರಾಮಸ್ಥರು ಶಿಕ್ಷಕನಿಗೆ ಥಳಿಸಿದ್ದಾರೆ. ಶಿಕ್ಷಕನ ವಿರುದ್ಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಾಲೆಯ ಬೇರೆಯ ವಿದ್ಯಾರ್ಥಿನಿಯರನ್ನೂ ವಿಚಾರಿಸಲಾಗಿದೆ. 7ರಿಂದ 11 ವಯಸ್ಸಿನ ಐದರಿಂದ ಆರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನುವುದು ವಿದ್ಯಾರ್ಥಿನಿಯರ ಹೇಳಿಕೆಯಿಂದ ತಿಳಿದುಬಂದಿದೆ. ಎಲ್ಲ ವಿದ್ಯಾರ್ಥಿನಿಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ವರದಿಯ ನಂತರ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಕಿರಿ ಸೊಸೆ ಜತೆ ಮಾವನ ಅಕ್ರಮ ಸಂಬಂಧ; ವಿಚಾರ ತಿಳಿದ ಹಿರಿ ಸೊಸೆ, ಅತ್ತೆ ಮಾಡಿದ್ದೇನು ಗೊತ್ತಾ?

https://www.vijayavani.net/bride-leaves-from-marriage-hall/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
