ಮಹಾರಾಷ್ಟ್ರ:ಶಿಕ್ಷಕನೊಬ್ಬ 9 ಮತ್ತು 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ನೀಲಿ ಚಿತ್ರ (Porn Videos) ಪ್ರದರ್ಶಿಸಿದ್ದಾನೆ. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಶಿಕ್ಷಕಿಯ ಮೇಲೆ ಕ್ರಮ ಜರುಗಿಸಿ, ಬೇರೊಂದು ಶಾಲೆಗೆ ವರ್ಗಾವಣೆ ಮಾಡಲಾಗಿದೆ. ಈ ಘಟನೆ ನಡೆದಿರುವುದು ಕೊಲ್ಹಾಪುರದ ವಿದ್ಯಾಲಂಕರ್ ಶೆಲ್ವಾಡಿ ಶಾಲೆಯಲ್ಲಿ. ಸದ್ಯ ಶಿಕ್ಷಕ ಶಿಕ್ಷಕ ವಿಪಿ ಬಂಗ್ಡಿ ಎಂಬಾತನನ್ನು ಸತಾರಾದಲ್ಲಿರುವ ಶಾಲೆಗೆ ವರ್ಗಾಯಿಸಲಾಗಿದೆ.
ತರಗತಿಯ ವಿದ್ಯಾರ್ಥಿನಿಯರು ಪ್ರಾಂಶುಪಾಲರ ಬಳಿ ತೆರಳಿ, ಇಂಗ್ಲೀಷ್ ಶಿಕ್ಷಕ ವಿಪಿ ಬಾಂಗ್ಡಿ ಕಳೆದ ಎರಡು ವರ್ಷಗಳಿಂದ ಬಹಿರಂಗವಾಗಿ ನೀಲಿ ಚಿತ್ರವನ್ನು ತರಗತಿಯೊಳಗೆ ಪ್ರದರ್ಶಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಅಲ್ಲದೆ ಶಿಕ್ಷಕ ತರಗತಿ ಸಮಯದಲ್ಲಿ ತಮ್ಮ ಭುಜದ ಮೇಲೆ ಮತ್ತು ಅವರ ಜೇಬಿನಲ್ಲಿ ಕೈ ಇಟ್ಟುಕೊಳ್ಳುತ್ತಾರೆ ಎಂದು ಕೆಲ ವಿದ್ಯಾರ್ಥಿನಿಯರು ಆರೋಪಿಸಿದರು.
ಸದ್ಯ ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ವಿದ್ಯಾರ್ಥಿನಿಯರ ಪಾಲಕರು ಶಿಕ್ಷಕನ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಪ್ರತಿಕ್ರಿಯಿಸಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪಾಲಕರಿಗೆ ಭರವಸೆ ನೀಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
