ಚೆನ್ನೈ:ಆಟ ಎಂದರೆ ಸೋಲು, ಗೆಲುವು ಸಹಜ. ಒಂದು ತಂಡ ಗೆದ್ದಾಗ ಅಥವಾ ಸೋತಾಗ ಆಟಗಾರರು, ಕೋಚ್​ ಹೇಗೆ ವರ್ತಿಸುತ್ತಾರೆ ಎಂಬುದು ಅವರ ಕ್ರೀಡಾ ಮನೋಭಾವಕ್ಕೆ ಸಾಕ್ಷಿಯಾಗಿರುತ್ತದೆ. ಆದರೆ, ಇಲ್ಲೊಬ್ಬ ಕೋಚ್​ ತಂಡ ನಿರೀಕ್ಷಿತ ಪ್ರದರ್ಶನ ನೀಡದೆ ಸೋತಿದ್ದಕ್ಕೆ ಕುಪಿತಗೊಂಡು ಆಟಗಾರರನ್ನು ಮನಬಂದಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸಖತ್​ ವೈರಲ್​ ಆಗಿದೆ.
ತಮಿಳುನಾಡಿನ ಸೇಲಂನಲ್ಲಿ ಈ ಘಟನೆ ನಡೆದಿದ್ದು, ಹಲ್ಲೆ ಮಾಡಿದ ಶಿಕ್ಷಕನ ಹೆಸರು ಅಣ್ಣಾಮಲೈ ಎಂದು ತಿಳಿದು ಬಂದಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಂಗಗಿರಿ ಜಿಲ್ಲಾ ಶಿಕ್ಷಣಾಧಿಕಾರಿ ತನಿಖೆ ಆರಂಭಿಸಿದ್ದು, ಅಣ್ಣಾಮಲೈ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಖಾಸಗಿ ಶಾಲೆಯ ಆಡಳಿತ ಮಂಡಳಿ ತಿಳಿಸಿದೆ.
Seriously this is not the way to treat your players 😐pic.twitter.com/wniTRS9XlS
ಇದನ್ನೂ ಓದಿ:ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ: ಡಿಸಿಎಂ ಡಿ.ಕೆ. ಶಿವಕುಮಾರ್
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಸೋಲಿನ ಬಳಿಕ ಹತಾಶೆಯಿಂದ ಮೈದಾನದಲ್ಲಿ ತಲೆತಗ್ಗಿಸಿ ಕುಳಿತಿರುವ ವಿದ್ಯಾರ್ಥಿಗಳ ಬಳಿ ಹೋಗುವ ಶಿಕ್ಷಕ ಅಣ್ಣಾಮಲೈ ಅವರನ್ನು ನಿಂದಿಸುತ್ತಾ ಕಪಾಳಕ್ಕೆ ಹೊಡೆಯಲು ಶುರು ಮಾಡುತ್ತಾನೆ. ಗೋಲ್​ ಕೀಪರ್​ ವಿದ್ಯಾರ್ಥಿಗೆ ನೀನು ಗಂಡಸಾ ಅಥವಾ ಹೆಂಗಸಾ ಎಂದು ಬೈದು ಎಲ್ಲರ ಮುಂದೆ ಹೊಡೆದು ಅವಮಾನಿಸುತ್ತಿರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
ಈ ವಿಡಿಯೋ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಇದಲ್ಲದೆ ಶಿಕ್ಷಕನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ನೆಟ್ಟಿಗರು ಆಗ್ರಹಿಸಿದ್ದು, ಮುಂದೆ ಯಾರು ಕೂಡ ವಿದ್ಯಾರ್ಥಿಗಳಿಗೆ ಈ ರೀತಿ ಮಾಡಬಾರದು ಎಂದು ಕಮೆಂಟ್​ ಹಾಕಿ ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 19 =
Remember me
