ಮಧ್ಯಪ್ರದೇಶ:ಶಾಲಾ ಶಿಕ್ಷಕಿಯೊಬ್ಬರು ಲಂಚ ಸ್ವೀಕರಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್​ ಆಗುತ್ತಿದ್ದಂತೆ, ವಿಡಿಯೋ ಗಮನಿಸಿದ ಶಿಕ್ಷಣ ಇಲಾಖೆ ಅವರನ್ನು ಕೆಲಸದಿಂದ ಅಮಾನುತುಗೊಳಿಸಿದೆ.
ಇದನ್ನೂ ಓದಿ:ಮಹಿಳಾ ಪೇದೆ ಸ್ನಾನ ಮಾಡುವುದನ್ನು ರಹಸ್ಯವಾಗಿ ವಿಡಿಯೋ ಮಾಡಿದ ಟ್ರೇನಿ ಕಾನ್‌ಸ್ಟೆಬಲ್; ಎಫ್‌ಐಆರ್ ದಾಖಲು
ಮಹಿಳೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಪ್ರೌಢ ಶಾಲೆಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿಸಲಾಗಿದ್ದು, 6,000 ರೂ. ಲಂಚ ಸ್ವೀಕರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್​ ಆಗಿದೆ. ದೃಶ್ಯ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಈ ವಿಷಯ ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿದೆ. ಘಟನೆಯ ಬೆನ್ನಲ್ಲೇ ಇಲಾಖೆಯ ಅಧಿಕಾರಿಗಳು ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ.
ಇದನ್ನೂ ಓದಿ:“ಆಧುನಿಕ ಬಟ್ಟೆಗಳು ಲೈಂಗಿಕತೆಗೆ ಪ್ರಚೋದನಕಾರಿ ಎಂದು ಪರಿಗಣಿಸಬಾರದು”: ಮಹಿಳೆಯರ ನಿಂದನೆ ತಡೆಯಲು ‘ಸುಪ್ರೀಂ’ ಕೈಪಿಡಿ
ಮೂಲಗಳ ಪ್ರಕಾರ, ರಾಜನಗರ ಕನ್ಯಾ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಶಿಕ್ಷಕರು ನಗದು ಸ್ವೀಕರಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಜಿಲ್ಲಾ ಶಿಕ್ಷಣಾಧಿಕಾರಿ ಎಂ.ಕೆ. ಕಾಟೋರಿ ಅವರು ಸಾಗರದಲ್ಲಿರುವ ಉಪನಿರ್ದೇಶಕರಿಗೆ ಪತ್ರ ಬರೆದಿದ್ದರು. ಇದನ್ನು ಗಮನಿಸಿದ ಉಪನಿರ್ದೇಶಕರು ಇದೀಗ ಸಸ್ಪೆಂಡ್​ ಮಾಡಿದ್ದಾರೆ,(ಏಜೆನ್ಸೀಸ್).
ಕಾಂಗ್ರೆಸ್​ ಸರ್ಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ: ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 9 =
Remember me
