ತುಮಕೂರು:ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಕಾಮುಕ ಶಿಕ್ಷಕನ ರಂಗಿನಾಟ ಬಯಲಾಗಿದೆ. ವಿದ್ಯಾರ್ಥಿನಿಯರ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ರೊಚ್ಚಿಗೆದ್ದ ಪೋಷಕರು‌ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಆರೋಪ ಕೇಳಿಬರುತ್ತಿದ್ದಂತೆ ಕಾಮುಕ ಶಿಕ್ಷಕ ಮಂಜುನಾಥ್ ಹಾಗೂ ಮುಖ್ಯ ಶಿಕ್ಷಕ ನಟರಾಜ್​ರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಬೋರನಗುಂಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
4 ಮತ್ತು 5ನೇ ತರಗತಿ ವಿದ್ಯಾರ್ಥಿನಿಯರ ಅಂಗಾಂಗ ಮುಟ್ಟಿ ಶಾಲೆಯ ಕೊಠಡಿಯಲ್ಲೇ ಲೈಗಿಂಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ಶಿಕ್ಷಕನ ವರ್ತನೆಗೆ ಬೇಸತ್ತ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಶಿಕ್ಷಕನ ವಿರುದ್ಧ ತಿರುಗಿ ಬಿದ್ದ ಪೋಷಕರು ಹಾಗೂ ಗ್ರಾಮಸ್ಥರು‌ ಹಿರಿಯ ಅಧಿಕಾರಿಗಳಿಗೆ ದೂರು‌ ನೀಡಿದ್ದರು. ಇಷ್ಟೇ ಅಲ್ಲದೆ, ಕಾಮುಕ ಶಿಕ್ಷಕನನ್ನು ಬಂಧಿಸುವಂತೆ ಶಾಲೆಯ ಬಳಿ ಬಂದು ಪ್ರತಿಭಟನೆ ಸಹ ನಡೆಸಿದ್ದರು.
ಇದನ್ನೂ ಓದಿ: ಕರೊನಾ ಸೋಂಕು ಪ್ರಕರಣದಲ್ಲಿ ಏರಿಕೆ; ಕೋವಿಡ್ ತಡೆಗೆ ಆರೋಗ್ಯ ಇಲಾಖೆಯಿಂದ ಪಂಚಸೂತ್ರ
ಪ್ರತಿಭಟನೆಯ ನಡುವೆಯೇ ಕಾಮುಕ ಶಿಕ್ಷಕನ ಮೇಲೆ ಗ್ರಾಮಸ್ಥರು ಹಲ್ಲೆಗೆ ಯತ್ನಿಸಿದ್ದರು. ಶಿಕ್ಷಕನ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಧುಗಿರಿ ಬಿ.ಇ.ಒ. ತಿಮ್ಮರಾಜು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಮೇಲ್ನೋಟಕ್ಕೆ ಕಾಮುಕ ಶಿಕ್ಷಕ‌ ಮಂಜುನಾಥ್ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಶಾಲೆಯ ಮುಖ್ಯ ಶಿಕ್ಷಕ ನಟರಾಜ್ ಕರ್ತವ್ಯ ಲೋಪ ಎಸಗಿರೋದು ಸಾಬೀತಾದ ಹಿನ್ನೆಲೆ ಇಬ್ಬರನ್ನು ಅಮಾನತು ಮಾಡಲಾಗಿದೆ.
ಘಟನೆ ಸಂಬಂಧ ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸರಿಂದ ಕಾಮುಕ ಶಿಕ್ಷಕ ಮಂಜುನಾಥ್ ಬಂಧನವಾಗಿದೆ. ಘಟನೆ ಸಂಬಂಧ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.(ದಿಗ್ವಿಜಯ ನ್ಯೂಸ್​)
ಕೊರತೆಯಾಗದು ಆಹಾರ, ಏರಿಕೆಯಾಗದು ದರ..

ಆರೋಗ್ಯಕರ ಬೆಳವಣಿಗೆ: ಸರ್ಕಾರಿ ವೈದ್ಯಕೀಯ ಕಾಲೇಜು ಸಂಖ್ಯೆ ಹೆಚ್ಚಳ

ಅನ್ನ ಪ್ರಸಾದ: ಮನೋಲ್ಲಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 3 =
Remember me
