ಪಾಲ್ಘರ್​:ಅಪ್ರಾಪ್ತ ವಯಸ್ಕಳೊಬ್ಬಳು ಕಿಡ್ನ್ಯಾಪ್​ ನಾಟಕವಾಡಿ ಬಾಯ್​ಫ್ರೆಂಡ್​ ಜತೆಗೆ ಓಡಿಹೋಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಎಂಬಲ್ಲಿ ನಡೆದಿದೆ.ವಿರಾರ್ ಪ್ರದೇಶದಲ್ಲಿ ನೆಲೆಸಿರುವ ಮತ್ತು ಕಂಪನಿಯೊಂದರ ಹೌಸ್‌ಕೀಪಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ 17 ವರ್ಷದ ಬಾಲಕಿ ಕಳೆದ ಶುಕ್ರವಾರದಂದು ಕೆಲಸಕ್ಕೆ ತೆರಳಿದ್ದಳು. ಆದರೆ ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಆಕೆಯ ಬಗ್ಗೆ ಆತಂಕಗೊಂಡ ಕುಟುಂಬಸ್ಥರು ಸ್ನೇಹಿತರು, ಆಫೀಸ್​ ಸಿಬ್ಬಂದಿಯನ್ನು ವಿಚಾರಿಸಿದ್ದರು.ಇದನ್ನೂ ಓದಿ:ಪದವಿ ಕಾಲೇಜುಗಳಲ್ಲಿ ಯೋಗ ದಿನಾಚರಣೆಗೆ ಸೂಚನೆಈ ವೇಳೆ ಯುವತಿಯ ಸಹೋದರನಿಗೆ ವಾಟ್ಸ್​​ಆ್ಯಪ್ ಮೂಲಕ ವಾಯ್ಸ್ ಮೆಸೇಜ್ ಕಳುಹಿಸಿ ತನ್ನನ್ನು ಯಾರೋ ಅಪಹರಿಸಿದ್ದಾರೆ. ತನಗೆ ಏನು ನಡೆಯುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ಹೇಳಿ ತಾನು ಪ್ರೀತಿಸುತ್ತಿದ್ದ ಯುವಕನ ಜತೆಗೆ ಕೋಲ್ಕತಾಗೆ ಓಡಿ ಹೋಗಿದ್ದಾಳೆ.ಕೂಡಲೇ ಆಕೆಯ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ, ನಡೆದ ಘಟನೆ ಬಗ್ಗೆ ತಿಳಿಸಿ ದೂರು ದಾಖಲಿಸಿದ್ದಾರೆ. ತಕ್ಷಣವೇ ಪೊಲೀಸರು ತನಿಖೆಯನ್ನು ಪ್ರಾರಂಭಿಸಿ ಕೆಲವೇ ಘಂಟೆಗಳಲ್ಲಿ, ಹುಡುಗಿ ತನ್ನ ಗೆಳೆಯನೊಂದಿಗೆ ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ವಿಮಾನದ ಮೂಲಕ ಹೋಗಿದ್ದಾಳೆ ಎಂಬ ಮಾಹಿತಿಯನ್ನು ಕಲೆ ಹಾಕಿದೆ.ಸದ್ಯ, ಇವರಿಬ್ಬರ ಪತ್ತೆಗೆ ಮಹಾರಾಷ್ಟ್ರ ಪೊಲೀಸ್​​ ತಂಡವು ಕೋಲ್ಕತಾಗೆ ತೆರಳಿದ್ದು, ಬಾಲಕಿಯು ಅಪ್ರಾಪ್ತ ವಯಸ್ಸಿನವಳಾಗಿರುವ ಕಾರಣ ಹೆಸರನ್ನು ಬಹಿರಂಗಪಡಿಸಿಲ್ಲ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
