ದಿಸ್ಪುರ:ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಮತ್ತಷ್ಟು ಅತ್ಯಾಚಾರ ಘಟನೆಗಳೂ ಬೆಳಕಿಗೆ ಬರುತ್ತಿವೆ. ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿನಿ ಮೇಲೆ ಕಸಗುಡಿಸುವವನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದನ್ನು ಮರೆಯುವ ಮುನ್ನವೇ ಅಸ್ಸಾಂನಲ್ಲಿ ಮತ್ತೊಬ್ಬ ಬಾಲಕಿ ಮೇಲೆ ಪುಂಡರ ಗುಂಪು ಕ್ರೌರ್ಯ ಮೆರೆದಿದೆ.
ಇದನ್ನೂ ಓದಿ:ಅನಿಲ್​ ಅಂಬಾನಿ ಮೇಲೆ 5ವರ್ಷ ನಿಷೇಧ ಹೇರಿದ ಸೆಬಿ..25ಕೋಟಿ ದಂಡ! ಕಾರಣ ಇದೇ ನೋಡಿ..
ಅಸ್ಸಾಂನಲ್ಲಿ ಗುರುವಾರ 14 ವರ್ಷದ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಸ್ಸಾಂನ ನಾಗಾಂವ್ ಜಿಲ್ಲೆಯ ಬಾಲಕಿ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ತೆರಳಿದ್ದಳು. ಆಗ ದಾರಿಯಲ್ಲಿ ಮೂವರು ಹುಡುಗರು ಆಕೆಯನ್ನು ಅಡ್ಡಗಟ್ಟಿ ಸಮೀಪದ ಕೆರೆ ಬಳಿಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಬಳಿಕ ಅಲ್ಲಿಂದ ಓಡಿ ಹೋಗಿದ್ದಾರೆ.
ಬಾಲಕಿ ಕೆರೆಯ ಬಳಿ ವಿವಸ್ತ್ರಳಾಗಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ ನಂತರ, ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮೂವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಅಪ್ರಾಪ್ತೆ ಪೊಲೀಸರಿಗೆ ತಿಳಿಸಿದ ನಂತರ, ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಲಾಗಿದೆ. 12 ಗಂಟೆಯೊಳಗೆ ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವೈದ್ಯೆ ಅತ್ಯಾಚಾರ ಪ್ರಕರಣ: ಆರೋಪಿಗೆ ಅಶ್ಲೀಲ ವಿಡಿಯೋ ವೀಕ್ಷಿಸುವ ಚಟ! ಸಿಬಿಐ ತನಿಖೆಯಲ್ಲಿ ಹಲವು ವಿಷಯ ಬಹಿರಂಗ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
