ಲಖನೌ:ನಾಲ್ವರು ದುರುಳರು ತನಗೆ ನೀಡುತ್ತಿದ್ದ ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ ಒಡ್ಡಿದ ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳಿಗೆ ಸ್ಯಾನಿಟೈಸರ್​ ಕುಡಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಘಠನೆಯೂ ಜುಲೈ 27ರಂದು ನಡೆದಿದ್ದು, ಅಪ್ರಾಪ್ತ ವಯಸ್ಕ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಅಸುನೀಗಿದ್ದಾಳೆ. ಪ್ರಕರಣದ ನಾಲ್ವರು ಆರೋಪಿಗಳು ತಲೆಮಾರಿಸಿಕೊಂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಪೊಲೀಸ್​ ಇಲಾಖೆ ತಂಡ ರಚಿಸಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಬರೇಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್​ ಭಾಟಿ ಜುಲೈ 27ರಂದು ಅಪ್ರಾಪ್ತ ವಯಸ್ಕಳು ಶಾಲೆ ಮುಗಿದ ಬಳಿಕ ತನ್ನ ಸಹೋದರನೊಂದಿಗೆ ಮನೆಗೆ ವಾಪಸ್​ ಆಗುತ್ತಿದ್ದ ವೇಳೆ ಉದೇಶ್​ ರಾಥೋಢ್​ ಎಂಬಾತ ಬಾಲಕಿಯನ್ಉ ಅಡ್ಡಗಟ್ಟಿದ್ದಾನೆ.
ಇದನ್ನೂ ಓದಿ:ಈಜಲು ಹೋಗಿ ನೀರು ಪಾಲಾದ ಬಾಲಕ; ಆತನನ್ನು ನೋಡಿ ಸ್ಥಳದಲ್ಲೇ ಪ್ರಾಣಬಿಟ್ಟ ಮಹಿಳೆ
ಬಳಿಕ ಆಕೆಗೆ ನಡುರಸ್ತೆಯಲ್ಲೇ ಆತ ಕಿರುಕುಳ ನೀಡಲು ಶುರು ಮಾಡಿದ್ದು, ಈತನಿಗೆ ಇನ್ನು ಮೂವರು ಸಾಥ್​ ನೀಡಿದ್ಧಾರೆ. ಇದನ್ನು ಪ್ರಶ್ನಿಸಿದ ಆಕೆಯ ಸಹೋದರನಿಗೆ ಆರೋಪಿಗಳ ಮನಬಂದಂತೆ ಥಳಿಸಿ ಬಾಲಕಿಗೆ ಸ್ಯಾನಿಟೈಸರ್​ ಕುಡಿಸಿ ಪರಾರಿಯಾಗಿದ್ದಾರೆ. ಈ ಕೃತ್ಯವನ್ನು ಆರೋಪಿಗಳು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ.
ಸ್ಯಾನಿಟೈಸರ್​ ಸೇವಿಸಿ ಅಸ್ವಸ್ಥಗೊಂಡಿದ್​ದ ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾಳೆ. ಮೃತ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದ್ದು, ವಿಶೇಷ ತಂಡ ಒಂದನ್ನು ರಚಿಸಲಾಗಿದೆ ಎಂದು ಬರೇಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್​ ಭಾಟಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − two =
Remember me
