ಭೋಪಾಲ್:ಆಘಾತಕಾರಿ ಘಟನೆಯೊಂದಲ್ಲಿ ಅಪ್ರಾಪ್ತ ವಯಸ್ಕನೋರ್ವ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ಸ್ವಂತ ತಂಗಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಈ ಕೃತ್ಯ ಮರೆಮಾಚಲು ಮಗನಿಗೆ ಸಹಾಯ ಮಾಡಿದ ಆರೋಪದ ಮೇಲೆ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿವೇಕ್​ ಸಿಂಗ್, ಏಪ್ರಿಲ್​ 24ರಂದು ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕನೋರ್ವ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿ 9 ವರ್ಷದ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆ ಮನೆಯವರ ಬಳಿ ಹೇಳುತ್ತಾಳೆ ಎಂಬ ಭಯದಿಂದ ಆಕೆಯ ಕತ್ತು ಹಿಸುಕಿ ಕೊಂದು ಬಳಿಕ ಈ ವಿಚಾರವನ್ನು ತನ್ನ ತಾಯಿ ಹಾಗೂ ಸಹೋದರಿಯರ ಬಳಿ ಹೇಳಿಕೊಂಡಿದ್ದಾನೆ.
ಇದನ್ನೂ ಓದಿ:ಪ್ಯಾರಿಸ್​ ಒಲಿಂಪಿಕ್ಸ್​ 2024; ರೋಚಕ ಪಂದ್ಯದಲ್ಲಿ ಗೆದ್ದು ಶುಭಾರಂಭ ಕಂಡ ಭಾರತ ಹಾಕಿ ತಂಡ
ಬಳಿಕ ತನ್ನ ತಾಯಿ ಹಾಗೂ ಇನ್ನೋರ್ವ ಸಹೋದರಿಯ ಸಹಾಯದಿಂದ ಮೃತದೇಹವನ್ನು ತಾನು ವಾಸಿಸುವ ಮನೆಯಿಂದ ಸ್ವಲ್ಪ ದೂರದಲ್ಲೇ ಇದ್ದ ಪಾಳುಬಿದ್ದ ಮನೆಗೆ ಸಾಗಿಸಿದ್ದು, ಬಾಲಕಿಯ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಧಿಕಾರಿಗಳು 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದು, ತನಿಖೆ ವೇಳೆ ದೊರೆತ ಸಾಕ್ಷ್ಯಾಧಾರವನ್ನು ಆಧರಿಸಿ ಅಪ್ರಾಪ್ರ ವಯಸ್ಕ ಬಾಲಕ ಹಾಗೂ ಆತನ ತಾಯಿಯನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆತ ರಾತ್ರಿ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿ ಪಕ್ಕದಲ್ಲೇ ಮಲಗಿದ್ದ ಸಹೋದರಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯ ಹೇಳಿಕೆಯನ್ನು ಆಧರಿಸಿ ಈತನಿಗೆ ಸಹಾಯ ಮಾಡಿದ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ವಶಕ್ಕೆ ಪಡೆಯಲಾಗಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿವೇಕ್​ ಸಿಂಗ್​ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − 5 =
Remember me
