ಲಖನೌ:ಮದುವೆ ದಿಬ್ಬಣದಲ್ಲಿ ಡ್ಯಾನ್ಸ್​ ಆಡುವ ವಿಚಾರವಾಗಿ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರಪ್ರದೇಶದ ಸುಲ್ತಾನಪುರ ಜಿಲ್ಲೆಯ ಮಾಧವಪುರ ಬೆಳವಾಯಿ ಎಂಬ ಗ್ರಾಮದಲ್ಲಿ ನಡೆದಿದೆ.
ಘಟನೆಯು ಶುಕ್ರವಾರ ರಾತ್ರಿ 9:30ರ ಸುಮಾರಿಗೆ ನಡೆದಿದ್ದು, ಮೃತ ದುರ್ದೈವಿಯನ್ನು ಸೂರಜ್ (17) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಹಲವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಐದು ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಈ ಕುರಿತು ಪ್ರತಿಕ್ರಿಯಿಸಿರುವ ಬೆಳವಾಯಿ ಪೊಲೀಸ್​ ಠಾಣಾಧಿಕಾರಿ ಶೈಲೇಂದ್ರ ಪ್ರತಾಪ್​ ಸಿಂಗ್​, ಬೆಳವಾಯಿ ಗ್ರಾಮದ ನಿವಾಸಿ ಶ್ಯಾಮ್​ಲಾಲ್​​ ಅವರ ನಿವಾಸದಲ್ಲಿ ಘಟನೆ ನಡೆದಿದ್ದು, ಡ್ಯಾನ್ಸ್​ ಆಡುವ ವಿಚಾರವಾಗಿ ವರನ ಮತ್ತು ವಧುವಿನ ಕಡೆಯವರಿಗೆ ಗಲಾಟೆಯಾಗಿದೆ. ಈ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸೂರಜ್​ ಸಹೋದರ ಸಚಿನ್​ನನ್ನು ಥಳಿಸಿದ್ದಾನೆ.
ಹಲ್ಲೆ ಮಾಡಿರುವ ಬಗ್ಗೆ ಸಚಿನ್​ ತನ್ನ ಸಹೋದರನ ಬಳಿ ಹೇಳಿಕೊಂಡಿದ್ದು, ಈ ಬಗ್ಗೆ ವಿಚಾರಿಸಲು ತೆರಳಿದಾಗ ಆತನ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಅಪರಿಚಿತ ವ್ಯಕ್ತಿಗಳು ಪರಾರಿಯಾಗಿದ್ದಾರೆ. ಕೂಡಲೇ ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಸಚಿನ್​ ಹಾಗೂ ಅಜಯ್​ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೆಳವಾಯಿ ಪೊಲೀಸ್​ ಠಾಣಾಧಿಕಾರಿ ಶೈಲೇಂದ್ರ ಪ್ರತಾಪ್​ ಸಿಂಗ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
