ಇಂದೋರ್​:ಮಧ್ಯಪ್ರದೇಶದ ಇಂದೋರ್ ಮೂಲದ ಬಾಲಕಿ ತನಿಷ್ಕಾ ಸುಜಿತ್​ 15ನೇ ವಯಸ್ಸಿಗೆ ಬ್ಯಾಚುಲರ್​ ಆಫ್​ ಆರ್ಟ್ಸ್​​(BA) ಅಂತಿಮ ವರ್ಷದ ಪರೀಕ್ಷೆ ಬರೆಯಲು ಸಿದ್ದತೆ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಲಹೆ ಪಡೆದಿದ್ದಾಳೆ.
ಈ ವೇಳೆ ಬಾಲಕಿ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ(CJI) ಆಗಬೇಕೆಂಬ ಆಸೆ ವ್ಯಕ್ತಪಡಿಸಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಲಹೆ ಪಡೆದಿದ್ಧಾಳೆ.
2020ರಲ್ಲಿ ಕೋವಿಡ್​ನಿಂದಾಗಿ ತಂದೆ ಹಾಗೂ ತಾತನನ್ನು ಕಳೆದುಕೊಂಡ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವಾನ ಹೇಳಿದ್ದು ತಾನು ಅಂದುಕೊಂಡಿರುವ ದಾರಿಯಲ್ಲಿ ನಡೆಯುವಂತೆ ಪ್ರೋತ್ಸಾಹಿಸಿದರು ಎಂದು ಬಾಲಕಿ ನೆನಪಿಸಿಕೊಂಡಿದ್ದಾಳೆ.
ಇದನ್ನೂ ಓದಿ:VIDEO| RCB vs LSG; ರೋಚಕ ಪಂದ್ಯ ಮುಗಿದ ಬಳಿಕ ಗಂಭೀರ್​​ ಮಾಡಿದ್ದಾದರೂ ಏನು?
ಇಂದೋರ್​ನ ಪ್ರತಿಷ್ಠಿತ ದೇವಿ ಅಹಲ್ಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಐಆದ ತನಿಷ್ಕಾ ಏಪ್ರಿಲ್​ 19ರಿಂದ 28ರವರೆಗೆ ನಡೆಯುವ BA(Psychology) ಪರೀಕ್ಷೆ ಬರೆಯಲಿದ್ದಾರೆ.
ತಾನು BA ಪರೀಕ್ಷೆಯಲ್ಲಿ ಉತ್ತೀರ್ಣಳಾದ ನಂತರ USನಲ್ಲಿ ಕಾನೂನು ವ್ಯಾಸಂಗ ಮುಗಿಸಿಭಾರತದ ಮುಖ್ಯ ನ್ಯಾಯಮೂರ್ತಿ ಆಗಿ ಕಾರ್ಯ ನಿರ್ವಹಿಸಬೇಕೆಂಬ ಆಸೆಯನ್ನು ಬಾಲಕಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ವ್ಯಕ್ತಪಡಿಸಿದ್ದಾಳೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸುಪ್ರೀಂ ಕೋರ್ಟ್​ಗೆ ಹೋಗಿ ವಕೀಲರು ವಾದ ಮಂಡಿಸುವುದನ್ನು ನೋಡು ಇದು ನಿನಗೆ ಮತ್ತಷ್ಟು ಪ್ರೇರಣೆ ನೀಡುತ್ತದೆ ಎಂದು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಕುರಿತು ಬಾಲಕಿ ಸಂತಸ ವ್ಯಕ್ತಪಡಿಸಿದ್ಧಾಳೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 5 =
Remember me
