ಇಂದೋರ್:ಇತ್ತೀಚೆಗೆ ಚಿಕ್ಕವಯಸ್ಸಿನವರೂ ಹೃದಯಾಘಾತಕ್ಕೀಡಾಗಿ ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆ ಪಟ್ಟಿಗೆ ಹದಿಹರೆಯದ ವಿದ್ಯಾರ್ಥಿನಿಯೊಬ್ಬಳೂ ಸೇರಿದ್ದಾಳೆ. ಶಾಲೆಗೆ ತೆರಳಿದ್ದ ಈಕೆ ಅಲ್ಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ.
ಮಧ್ಯಪ್ರದೇಶದ ಇಂದೋರ್​ನ ಉಷಾನಗರದಲ್ಲಿರುವ ಶಾಲೆಯೊಂದರಲ್ಲಿ ಈ ಪ್ರಕರಣ ನಡೆದಿದೆ, ಶುಕ್ರವಾರ ಪೊಲೀಸರು ಈ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. 11ನೇ ತರಗತಿ ವಿದ್ಯಾರ್ಥಿನಿ, ವೃಂದಾ ತ್ರಿಪಾಠಿ (16) ಸಾವಿಗೀಡಾದ ವಿದ್ಯಾರ್ಥಿನಿ. ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕಾಗಿ ರಿಹರ್ಸಲ್​ಗೆಂದು ಈಕೆ ಶಾಲೆಗೆ ಬಂದಾಗ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ:ಗಂಡನ ನಾಲಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡ್ತಿ; ವಾಪಸ್​ ಬಾ ಎಂದು ತವರಿಗೆ ಹೋಗಿ ಕರೆದಿದ್ದೇ ತಪ್ಪಾಯ್ತು!
ಬುಧವಾರ ರಿಹರ್ಸಲ್​ಗೆಂದು ಹೋಗಿದ್ದ ಈಕೆ ಅಲ್ಲೇ ಕುಸಿದು ಬಿದ್ದಿದ್ದಳು. ಅಸ್ವಸ್ಥಗೊಂಡ ಈಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ. ವಿದ್ಯಾರ್ಥಿನಿ ಕೋಲ್ಡ್ ವೇವ್​ನಿಂದಾಗಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಹೃದಯಾಘಾತಕ್ಕೆ ಮತ್ತೊಂದು ಬಲಿ; ತಂದೆ-ತಾಯಿಯ ಏಕೈಕ ಪುತ್ರ, ಜೆಡಿಎಸ್​ ಯುವ ಮುಖಂಡ ನಿಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
