ನವದೆಹಲಿ:ಕ್ರೀಡಾ​ ಜಗತ್ತಿನ ಮಹತ್ವದ ಬೆಳವಣಿಗೆಯೊಂದರಲ್ಲಿ 17 ವರ್ಷದ ಗ್ರ್ಯಾಂಡ್​ ಮಾಸ್ಟರ್​ ಡಿ. ಗುಕೇಶ್​ ಅಂತರಾಷ್ಟ್ರೀಯ ಚೆಸ್​​ ಫೆಡರೇಷನ್​ನ ಶ್ರೇಯಾಂಕದಲ್ಲಿ ದಿಗ್ಗಜ ವಿಶ್ವನಾಥನ್​ ಆನಂದ್​ ಅವರನ್ನು ಹಿಂದಿಕ್ಕಿ ಭಾರತದ ನಂಬರ್ 1 ಆಟಗಾರ ಎನ್ನಿಸಿಕೊಂಡಿದ್ಧಾರೆ.
ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ವಿಶ್ವಕಪ್‌ನ 2ನೇ ಸುತ್ತಿನಲ್ಲಿ ಸ್ಥಳೀಯ ಆಟಗಾರ ಇಸ್ಕ್ಯಾನ್ಡರೊವ್ ವಿರುದ್ದ ಗೆಲುವು ಸಾಧಿಸಿ 2.5 ರೇಟಿಂಗ್ ಅಂಕಗಳನ್ನು ಗಳಿಸಿದ್ದಾರೆ. ಗುಕೇಶ್‌ರ ಲೈವ್ ರೇಟಿಂಗ್ 2755.9 ಅಂಕಕ್ಕೆ ಏರಿಕೆಯಾಗಿದ್ದು, ವಿಶ್ವ ರ‍್ಯಾಂಕಿಂಗ್‌ನಲ್ಲಿ 9ನೇ ಸ್ಥಾನಕ್ಕೇರಿದ್ದಾರೆ. ಆನಂದ್‌ 2754.0 ಅಂಕ ಹೊಂದಿದ್ದು, ಒಂದು ಸ್ಥಾನ ಇಳಿಕೆ ಕಂಡು 10ನೇ ಸ್ಥಾನ ಪಡೆದಿದ್ದಾರೆ.
1991ರ ಜುಲೈನಲ್ಲಿ ಮೊದಲ ಬಾರಿಗೆ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರ ಪಟ್ಟಿಗೆ ಸೇರ್ಪಡೆಗೊಂಡಿದ್ದ ವಿಶ್ವನಾಥನ್ ಆನಂದ್, 1987ರ ಜನವರಿಯಿಂದಲೂ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ನಂ.1 ಆಟಗಾರನಾಗಿ ಮುಂದುವರೆದಿದ್ದರು. ಗುಕೇಶ್ ಸೆಪ್ಟೆಂಬರ್​ 01ರಂದು ಪ್ರಕಟಗೊಳ್ಳುವ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ರೇಟಿಂಗ್ ಕಾಯ್ದುಕೊಂಡರೆ, 1986ರಲ್ಲಿ ಪ್ರವೀಣ್ ಥಿಪ್ಸೆ ಬಳಿಕ ಆನಂದ್‌ಗಿಂತ ಉತ್ತಮ ರ‍್ಯಾಂಕಿಂಗ್‌ ಪಡೆದ ಮೊದಲ ಆಟಗಾರ ಎನ್ನಿಸಲಿದ್ದಾರೆ.
ಇದನ್ನೂ ಓದಿ:ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಪ್ರವಾಸಿಗ
Gukesh D won again today and has overcome Viswanathan Anand in live rating!There is still almost a month till next official FIDE rating list on September 1, but it's highly likely that 17-year-old will be making it to top 10 in the world as the highest-rated Indian player!…pic.twitter.com/n3I2JPLOJQ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + ten =
Remember me
