ಡೆಹ್ರಾಡೂನ್​:ಆಘಾತಕಾರಿ ಘಟನೆ ಒಂದರಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಘಟನೆ ಉತ್ತರಾಖಂಡದ ಉಧಮ್​ಸಿಂಗ್​ ನಗರ ಜಿಲ್ಲೆಯಲ್ಲಿ ನಡೆದಿದೆ.
14 ವರ್ಷದ ಮೃತ ಬಾಲಕಿಯ ತಾಯಿ ಹಾಗೂ ಸೋದರ ಮಾವ ನೀಡಿದ ದೂರಿನ ಮೇರೆಗೆ ನ್ಯಾಯಾಲಯದಿಂದ ಅನುಮತಿ ಪಡೆದು ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಮೇ 23ರಂದು ಬಾಲಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಳು. ಆಕೆಯ ತಂದೆ ಝಾಕಿರ್​ ಅಲಿ ಮೇಲೆ ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮನೆಯೊಳಗೆ ಪತಿಯ ಅಂತ್ಯಸಂಸ್ಕಾರ ಮಾಡಿದ ಪತ್ನಿ!
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮನೋಜ್​ ಕಟ್ಯಾಲ್​ ಮೃತ ಬಾಲಕಿಯ ತಾಯಿ ಹಾಗೂ ಸೋದರ ಮಾವ ನೀಡಿದ ದೂರಿನ ಆಧಾರದ ಮೇಲೆ ಶವವನ್ನು ಹೊರತೆಗೆದು ಮರಣೊತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಬಾಲಕಿಯನ್ನು ಹತ್ಯೆ ಮಾಡಿ ಆಕೆಯ ತಂದೆ ಝಾಕಿರ್​ ಅಲಿಯ ಅವಳ ಶವವನ್ನು ಹೂತ್ತಿಟ್ಟಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಪ್ರಕರಣ ಸಂಬಂಧ ನ್ಯಾಯಾಲಯದಿಂದ ಅನುಮತಿ ಪಡೆದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು ಕೊಲೆ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಆರೋಪಿ ತಂದೆಗಾಗಿ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮನೋಜ್​ ಕಟ್ಯಾಲ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
