ಪಟ್ನಾ;ಬಿಹಾರದ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತಮ್ಮ ಸರ್ಕಾರಿ ನಿವಾಸವನ್ನು ಕೋವಿಡ್ ಕೇರ ಸೆಂಟರ್ ಆಗಿ ಪರಿವರ್ತಿಸಿ ಸುದ್ದಿಯಾಗಿದ್ದಾರೆ. ಅವರು 100 ಹಾಸಿಗೆಗಳುಳ್ಳ ಕೇಂದ್ರವನ್ನು ಕೋವಿಡ್ ಆರೈಕೆಗಾಗಿ ಮೀಸಲಿರಿಸಿದ್ದಾರೆ.
ಅಲ್ಲದೇ ಈ ಆರೈಕೆ ಕೇಂದ್ರದಲ್ಲಿ ಆಕ್ಸಿಜನ್ ಸೌಲಭ್ಯ ಹಾಗೂ ಇನ್ನಿತರ ತುರ್ತು ಅವಶ್ಯಕತೆಗಳನ್ನು ಪೂರೈಸಲಾಗಿದೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಎಲ್ಲ ಸರ್ಕಾರಿ ನಿವಾಸಗಳನ್ನು ಕೋವಿಡ್ ಆರೈಕೆ ಕೇಂದ್ರ ಮತ್ತು ಕ್ವಾರಂಟೈನ್ ಕೇಂದ್ರವನ್ನಾಗಿ ಪರಿವರ್ತಿಸಲು ಬಿಹಾರ್ ಸರ್ಕಾರಕ್ಕೆ ತೇಜಸ್ವಿ ಯಾದವ್ ಮನವಿ ಮಾಡಿದ್ದಾರೆ. ಆದರೆ ಬಿಹಾರ ಸರ್ಕಾರದಿಂದ ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದಾರೆ.
ಇನ್ನು ಬಿಹಾರದಲ್ಲೂ‌ ಕೂಡ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಬುಧವಾರ 6584 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿವೆ. 111 ಜನ ಮೃತಪಟ್ಟಿದ್ದಾರೆ.
ಇದನ್ನೂ ಓದಿ;ರಾಜಭವನದ ಮುಂದೆ ಕುರಿ ಮಂದೆ ಜೊತೆ ಪ್ರತಿಭಟನೆ; ನೋಡುತ್ತಾ ನಿಂತ ಪೊಲೀಸರು !
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
