ಹೈದರಾಬಾದ್​:ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ನ್ಯಾಷನಲ್​ ಇನ್​ಸ್ಟಿಟ್ಯೂಟ್​ ಆಫ್​ ವೈರಾಲಜಿ ಸಹಯೋಗದಲ್ಲಿ ಹೈದರಾಬಾದ್​ ಮೂಲದ ಭಾರತ್​ ಬಯೋಟೆಕ್​ ಇಂಟರ್​ನ್ಯಾಷನಲ್​ ಲಿಮಿಟೆಡ್​ ಕಂಪನಿ ಅಭಿವೃದ್ಧಿಪಡಿಸಿರುವ ಕೋವಿಡ್​-19 ರೋಗನಿರೋಧಕ ಚುಚ್ಚುಮದ್ದು ಕೊವ್ಯಾಕ್ಸಿನ್​ ಅನ್ನು ಮಾನವರ ಮೇಲೆ ಪ್ರಯೋಗಿಸಲು ತೆಲಂಗಾಣ ಸಿದ್ಧವಾಗಿದೆ.
ನಿಜಾಂ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸಸ್​ನಲ್ಲಿ (ಎನ್​ಐಎಂಎಸ್​) ಮಾನವರ ಮೇಲೆ ಕೊವ್ಯಾಕ್ಸಿನ್​ ಪ್ರಯೋಗಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎನ್​ಐಎಂಎಸ್​ ಅಲ್ಲದೆ, ಕೊವ್ಯಾಕ್ಸಿನ್​ ಪರೀಕ್ಷೆಗಾಗಿ ಐಸಿಎಂಆರ್​ ದೇಶದ ಇನ್ನೂ 12 ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಂಡಿದೆ.ಆಗಸ್ಟ್​ 15ರಂದು ಕೊವ್ಯಾಕ್ಸಿನ್​ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಕೋವಿಡ್​ ಚಿಕಿತ್ಸಾ ಕೇಂದ್ರಗಳೆಲ್ಲವೂ ಕೊವ್ಯಾಕ್ಸಿನ್​ ಚುಚ್ಚುಮದ್ದನ್ನು ಮಾನವರ ಮೇಲೆ ಪ್ರಯೋಗಿಸಲು ಎಲ್ಲ ಆಸ್ಪತ್ರೆಗಳು ಎಲ್ಲ ರೀತಿಯ ಸಹಕಾರ ಕೊಡಬೇಕು ಎಂದು ಐಸಿಎಂಆರ್​ ಶುಕ್ರವಾರ ಪತ್ರ ಬರೆದಿತ್ತು.
ಆದರೆ, ಯಾವುದೇ ರೋಗನಿರೋಧಕ ಚುಚ್ಚುಮದ್ದನ್ನು ಎರಡು ಹಂತಗಳಲ್ಲಿ ಮಾನವರ ಮೇಲೆ ಪ್ರಯೋಗಿಸಬೇಕಾಗುತ್ತದೆ. ಇದಕ್ಕೆ ಕನಿಷ್ಠ ಎರಡು ವರ್ಷಗಳಾದರೂ ಬೇಕಾಗುತ್ತದೆ ಎಂದು ಹೇಳಿ ಕೆಲವರು ತರಾತುರಿಯಲ್ಲಿ ಕೊವ್ಯಾಕ್ಸಿನ್​ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಐಸಿಎಂಆರ್​ ನಿರ್ಧಾರವನ್ನು ಖಂಡಿಸುತ್ತಿದ್ದಾರೆ.
video/ ಆನೆಮರಿಗೆ ತಾಯಿಯಾನೆ ಪಾಠ ಮಾಡುವ ವಿಡಿಯೋ ವೈರಲ್​

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:seventeen − four =
Remember me
