ಹೈದರಾಬಾದ್:ದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಹಾಗೂ ಅಭ್ಯರ್ತೀಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ. ಚುನಾವಣೆ ಸಮಯದಲ್ಲಿ ಆರೋಪ-ಪ್ರತ್ಯಾರೋಪ ಮಾಡುವುದು ಸಹಜ. ಇದೀಗ ಅದಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮಾಜಿ ಸಿಎಂ ಕೆಸಿಆರ್​ ಪುತ್ರ, ಬಿಆರ್​ಎಸ್​ ನಾಯಕ ಕೆ.ಟಿ. ರಾಮರಾವ್​ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಆರೋಪ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ತೆಲಂಗಾಣ ಮುಖ್ಯಮಂತ್ರಿ ರೇವಂತ್​ ರೆಡ್ಡಿ ಅವರು ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ವಿಚಾರವನ್ನು ನಾನು ಈಗಾಗಲೇ 15ಕ್ಕಿಂತೆ ಹೆಚ್ಚು ಭಾರಿ ಹೇಳಿದ್ದೇನೆ. ಆದರೆ, ರೇವಂತ್​ ರೆಡ್ಡಿ ಈ ಒಂದು ವಿಚಾರಕ್ಕೆ ಬಿಟ್ಟು ಉಳಿದೆಲ್ಲಾ ವಿಷಯಗಳಿಗೆ ಪ್ರತಿಕ್ರಿಯಿಸಿದ್ದಾರೆ.
#WATCH| BRS leader KT Rama Rao says, "Said this 15 times so far, Revanth Reddy has not even reacted even once, because he reacts to everything small thing on the planet…I have levelled a specific allegation- Revanth Reddy will not remain with the Congress. Let me go out and…pic.twitter.com/tQjDBH4WV1
ಇದನ್ನೂ ಓದಿ:ಕಾರ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ; ಮೂವರ ದುರ್ಮರಣ, ಆರಕ್ಕೂ ಹೆಚ್ಚು ಮಂದಿ ಗಂಭೀರ
ಇತ್ತೀಚಿನ ದಿನಗಳಲ್ಲಿ ರೇವಂತ್​ ರೆಡ್ಡಿ ಅವರ ವರ್ತನೆ ಇದಕ್ಕೆ ಪೂರಕವೆಂಬಂತ್ತಿದೆ. ಒಂದು ಕಡೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಚೌಕಿದಾರ್ ಚೋರ್ ಹೈ ಎಂದು ಹೇಳುತ್ತಾರೆ. ಆದರೆ, ಅವರ ಪಕ್ಷದ ನಾಯಕನಾದ ರೇವಂತ್​ ರೆಡ್ಡಿ ಚೌಕಿದಾರ್ ನಮ್ಮ ದೊಡ್ಡಣ್ಣ ಎಂದು ಹೇಳುತ್ತಾರೆ. ರೇವಂತ್​ ರೆಡ್ಡಿ ಅವರು ಯಾರ ಸೂಚನೆಯಂತೆ ನಡೆದುಕೊಳ್ಳುತ್ತಿದ್ದಾರೆ ಎಂಬುದು ಮೊದಲು ಖಚಿತಪಡಿಸಬೇಕು.ರೇವಂತ್​ ರೆಡ್ಡಿ ಜೊತೆಗೆ ದಕ್ಷಿಣ ಭಾರತದ ಮತ್ತೋರ್ವ ನಾಯಕ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಇದಕ್ಕೆಲ್ಲಾ ಸ್ಪಷ್ಟ ಉತ್ತರ ಸಿಗಲಿದ್ದು, ಎಲ್ಲವನ್ನು ಕಾದು ನೋಡಬೇಕಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 50ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಡೌಟ್​. ಏಕೆಂದರೆ ಕಾಂಗ್ರೆಸ್​ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ಧಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 50ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ​ ಎಂದು ತೆಲಂಗಾಣ ಮಾಜಿ ಸಿಎಂ ಕೆಸಿಆರ್​ ಪುತ್ರ, ಬಿಆರ್​ಎಸ್​ ನಾಯಕ ಕೆ.ಟಿ. ರಾಮರಾವ್ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
