ಹೈದರಾಬಾದ್: ತೆಲಂಗಾಣದ ಕಾಂಗ್ರೆಸ್ ಪಕ್ಷವು ತನ್ನ ಶಾಸಕರನ್ನು ಪ್ರತಿಸ್ಪರ್ಧಿಗಳು ಸೆಳೆಯದಂತೆ ರಕ್ಷಿಸಲು, ಅಗತ್ಯವಿದ್ದರೆ ಅವರನ್ನು ಸ್ಥಳಾಂತರಿಸಲು ಹೈದರಾಬಾದ್‌ನ ಹೋಟೆಲ್‌ನಲ್ಲಿ ಬಸ್‌ಗಳನ್ನು ಸಿದ್ಧವಾಗಿ ಇರಿಸಿದೆ. ಖಾಸಗಿ ಟ್ರಾವೆಲ್ ಆಪರೇಟರ್‌ನ ಬಸ್‌ಗಳು ತಾಜ್ ಕೃಷ್ಣ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದು, ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತಿತರ ಎಐಸಿಸಿ ವೀಕ್ಷಕರು ಮೊಕ್ಕಾಂ ಹೂಡಿದ್ದಾರೆ. ಪಕ್ಷದ ನಾಯಕರನ್ನು ಒಗ್ಗಟ್ಟಾಗಿಡಲು ಡಿಕೆ ಶಿವಕುಮಾರ್ ರಾಜ್ಯದ 10 ಮಂದಿ ಸಚಿವರೊಂದಿಗೆ ಹೈದರಾಬಾದ್‌ನಲ್ಲಿದ್ದಾರೆ.
ವೀಕ್ಷಕರು ಮತ ಎಣಿಕೆ ಟ್ರೆಂಡ್‌ಗಳ ಮೇಲೆ ಕಣ್ಣಿಟ್ಟಿದ್ದು, ರಾಜ್ಯ ಪಕ್ಷದ ನಾಯಕರಿಗೆ ಅಗತ್ಯ ಸೂಚನೆಗಳನ್ನು ನೀಡುತ್ತಿದ್ದಾರೆ. ಎಲ್ಲರೂ ಪಕ್ಷಕ್ಕೆ ನಿಷ್ಠರಾಗಿರುವುದರಿಂದ ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷಾಂತರ ಮಾಡುವುದಿಲ್ಲ ಎಂದು ಸಚಿವ ಮುನಿಯಪ್ಪ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಶಿವಕುಮಾರ್ ಅವರು ಕೆಲವು ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಶುಕ್ರವಾರ ತಡರಾತ್ರಿ ಹೈದರಾಬಾದ್ ತಲುಪಿದರು.
ಕಾಂಗ್ರೆಸ್ ಗೆಲುವಿನ ವಿಶ್ವಾಸವಿದೆಏತನ್ಮಧ್ಯೆ, 119 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 70 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ತೆಲಂಗಾಣ ಎಐಸಿಸಿ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್‌ನ ಕಮಲ್‌ನಾಥ್‌ಗೂ ಹಿನ್ನಡೆ: ಮಧ್ಯಪ್ರದೇಶ ಪ್ರಮುಖ ಅಭ್ಯರ್ಥಿಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + twelve =
Remember me
