ನವದೆಹಲಿ:ಭೀಕರವಾದ ರಸ್ತೆಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಹನ್ಮಕೊಂಡ ಜಿಲ್ಲೆಯಎಲ್ಕತುರ್ಥಿ ಮಂಡಲದ ಶಾಂತಿ ನಗರದಲ್ಲಿ ರಸ್ತೆ ಅಪಘಾತ ಸಂಭವಿಸಿದೆ.
ಎದುರುಗಡೆಯಿಂದ ಬಂದ ಕಾರು ಹಾಗೂ ಲಾರಿ ಪರಸ್ಪರ ಡಿಕ್ಕಿ ಹೊಡೆದಿದೆ.ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಏತೂರುನಗರದಿಂದ ವೇಮುಲವಾಡಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ನಡೆದಿದ್ದೇನು?:ಏತೂರುನಗರಂ ಮಂಡಲ ಕೇಂದ್ರದ ಮಂಟೆನ ಶಂಕರ್ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ವೇಮುಲವಾಡಕ್ಕೆ ಹೋಗುತ್ತಿದ್ದರು.ಮಾರ್ಗಮಧ್ಯೆ ಹನ್ಮಕೊಂಡ ಜಿಲ್ಲೆಯ ಎಲ್ಕತುರ್ಥಿ ಬಳಿ ಮರಳು ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಂಟೆನ ಕಾಂತಯ್ಯ (72), ಮಂಟೆನ ಶಂಕರ್ (60), ಮಂಟೆನ ಭರತ್ (29) ಮತ್ತು ಮಂಟೆನ ವಂದನಾ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ವಾರಂಗಲ್ ಎಂಜಿಎಂಗೆ ರವಾನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಂಟೆನ ರೇಣುಕಾ (60), ಮಂಟೆನ ಭಾರ್ಗವ್ (30) ಮತ್ತು ಮಂಟೆನ ಶ್ರೀದೇವಿ (50) ಎಂಜಿಎಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಏತೂರುನಗರದಲ್ಲಿ ತಲ್ಲಣ ಮೂಡಿಸಿದೆ. ಮೃತರ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × five =
Remember me
