ಹೈದರಾಬಾದ್​:ಕರೊನಾ ಸೋಂಕು ಹಲವು ಜನಪ್ರತಿನಿಧಿಗಳಿಗೆ ಒಕ್ಕರಿಸುತ್ತಿದೆ. ಇದೀಗ ತೆಲಂಗಾಣ ಗೃಹ ಸಚಿವ ಮೊಹಮ್ಮದ್​ ಮಹಮೂದ್​ ಅಲಿ ಅವರಿಗೂ ಈ ಮಹಾಮಾರಿ ಸೋಂಕು ತಗುಲಿದೆ. ಭಾನುವಾರ ಸಂಜೆ ಸಚಿವರಲ್ಲಿ ಕರೊನಾ ದೃಢಪಟ್ಟಿದ್ದು, ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ.
ಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಹೈದರಾಬಾದ್​ನ ಜ್ಯುಬ್ಲೀ ಹಿಲ್​ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ಇದೀಗ ಅಲ್ಲೇ ಅಡ್ಮಿಟ್​ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಚಿವರು ಕೆಮ್ಮು, ಜ್ವರ, ಶೀತದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಅವರ ಐವರು ಗನ್​ಮೆನ್​ಗಳಲ್ಲಿ ಕರೊನಾ ದೃಢಪಟ್ಟಿತ್ತು. ಆಗಲೇ ಅವರೂ ತಪಾಸಣೆಗೆ ಒಳಗಾಗಬೇಕಿತ್ತು. ಆದರೆ ಸಚಿವರು ಈ ಮಧ್ಯೆ ಕೆಲವು ಸರ್ಕಾರಿ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದಾರೆ. (ಏಜೆನ್ಸೀಸ್​)
ನಮ್ಮ ಬೆಂಬಲ ಬಿಜೆಪಿಗೆ ಎಂದ್ರು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ; ಕಾಂಗ್ರೆಸ್​ ವಿರುದ್ಧ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
