ಮೇದಕ್​:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಕರೊನಾ ಸೋಂಕಿನಿಂದ ಗುಣವಾಗಲೆಂದು ಸರಿಯಾಗಿ ನಿದ್ರಿಸದೇ ಉಪವಾಸ ವ್ರತದೊಂದಿಗೆ ಪ್ರಾರ್ಥನೆ ಮಾಡುತ್ತಿದ್ದ ತೆಲಂಗಾಣದ ಟ್ರಂಪ್​ ಅಭಿಮಾನಿ ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ.
ಬುಸ್ಸಾ ಕೃಷ್ಣ ರಾಜು ಮೃತ ಟ್ರಂಪ್​ ಅಭಿಮಾನಿ. ಟ್ರಂಪ್​ ಅವರಿಗೆ ಕರೊನಾ ಸೋಂಕು ತಗುಲಿರುವ ಸುದ್ದಿ ಕೇಳಿ ರಾಜು ಆಘಾತಕ್ಕೆ ಒಳಗಾಗಿದ್ದರು ಎಂದು ಅವರ ಸ್ನೇಹಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಯುವ ವಿಜ್ಞಾನಿ ಆಂಧ್ರದ ವಿಜಯವಾಡದಲ್ಲಿ ಪತ್ತೆ..!
ರಾಜು ಅವರು ಟ್ರಂಪ್​ ಅವರ ಅಪ್ಪಟ್ಟ ಅಭಿಮಾನಿಯಾಗಿದ್ದರು. ದಿನನಿತ್ಯ ಪ್ರಾರ್ಥನೆ ಸಲ್ಲಿಸುವುದಕ್ಕಾಗಿಯೇ ಕಳೆದ ವರ್ಷ ತಮ್ಮ ಮನೆಯ ಮುಂದೆ ಟ್ರಂಪ್​ ಅವರ 6 ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದರು. ಪ್ರತಿನಿತ್ಯ ಪೂಜೆ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಕರೊನಾ ತಗುಲಿದೆ ಎಂಬ ಸುದ್ದಿ ಕೇಳಿದಾಗಿನಿಂದ ದುಃಖದಲ್ಲಿದ್ದರು. ಸರಿಯಾಗಿ ನಿದ್ರೆ ಮಾಡುತ್ತಿರಲಿಲ್ಲ ಮತ್ತು ಉಪವಾಸವಿದ್ದು, ಟ್ರಂಪ್​ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟರು ಎಂದು ಆಪ್ತರು ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಭಾರತದಲ್ಲಿ ಐದೇ ವರ್ಷದಲ್ಲಿ ಡಿಜಿಟಲ್​ ಪಾವತಿ ಆರು ಪಟ್ಟು ಹೆಚ್ಚಳ: ಲಾಕ್​ಡೌನ್​ನಲ್ಲೂ ಭಾರಿ ಏರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
