ಹೈದರಾಬಾದ್​:ನವೆಂಬರ್ 30ರಂದು ಮತದಾನ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಬಹಿರಂಗ ಪ್ರವಾರವು ಮಂಗಳವಾರ ಸಂಜೆ 5 ಗಂಟೆಗೆ ಕೊನೆಗೊಂಡಿದೆ.
ಅಕ್ಟೋಬರ್ 9 ರಂದು ಚುನಾವಣೆ ಆಯೋಗ ವೇಳಾಪಟ್ಟಿ ಪ್ರಕಟಿಸಿದ ನಂತರ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಆಡಳಿತಾರೂಢ ಬಿಆರ್‌ಎಸ್ (ಭಾರತ ರಾಷ್ಟ್ರ ಸಮಿತಿ) ಪಕ್ಷವು ಸತತ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ತೀವ್ರ ಹೋರಾಟ ನಡೆಸುತ್ತಿದೆ. ಈ ಹಿಂದಿನ ಚುನಾವಣೆಗಳಲ್ಲಿ ಹೆಚ್ಚಿನ ಸಾಧನೆ ಮಾಡಿದಿದ್ದರೂ ಈ ಬಾರಿ ಬಿಜೆಪಿಯು ರಾಜ್ಯದಲ್ಲಿ ಗಟ್ಟಿಯಾಗಿ ನೆಲೆಯೂರಲು ಶತಪ್ರಯತ್ನ ನಡೆಸಿದೆ.
ಬಿಆರ್‌ಎಸ್ ಪಕ್ಷದ ವರಿಷ್ಠ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಅವರ ಪುತ್ರ ಮತ್ತು ಸಚಿವ ಕೆ.ಟಿ.ರಾಮರಾವ್, ಟಿಪಿಸಿಸಿ ಅಧ್ಯಕ್ಷ ಎ ರೇವಂತ್ ರೆಡ್ಡಿ ಮತ್ತು ಬಿಜೆಪಿ ಲೋಕಸಭಾ ಸದಸ್ಯರಾದ ಬಂಡಿ ಸಂಜಯ್ ಕುಮಾರ್, ಡಿ ಅರವಿಂದ್ ಮತ್ತು ಸೋಯಂ ಬಾಪುರರಾವ್ ಸೇರಿ 2,290 ಸ್ಪರ್ಧಿಗಳು ಕಣದಲ್ಲಿದ್ದಾರೆ. ಕೆಸಿಆರ್ ಅವರು ಗಜ್ವೇಲ್ ಮತ್ತು ಕಾಮರೆಡ್ಡಿ ಈ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ,
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 12 ಚುನಾವಣೆ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ, ಸೋಮವಾರ ಹೈದರಾಬಾದ್‌ನಲ್ಲಿ ಭಾರಿ ಅಬ್ಬರದ ನಡುವೆ ರೋಡ್‌ಶೋ ಕೂಡ ನಡೆಸಿದರು. ತೆಲಂಗಾಣ ಸೇರಿ 5 ರಾಜ್ಯಗಳ ಮತಎಣಿಕೆ ಡಿಸೆಂಬರ್ 3ರಂದು ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 20 =
Remember me
