ಹೈದರಾಬಾದ್:ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ದೂರು ದಾಖಲಿಸಿರುವ ಘಟನೆ ತೆಲಂಗಾಣದ ಹಯಾತ್‌ನಗರದಲ್ಲಿ ನಡೆದಿದೆ.ಹಯಾತ್‌ನಗರದ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿನಿ ಮತ್ತು ಅದೇ ತರಗತಿಯಲ್ಲಿ ಓದುತ್ತಿರುವ ಮತ್ತೊಬ್ಬ ಬಾಲಕಿ ಹಿಜಾಬ್ ಧರಿಸಿ ಜೂನ್ 22ರಂದು ಶಾಲೆಗೆ ಬಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಂಶುಪಾಲರು ಮತ್ತು ಶಿಕ್ಷಕರು ಆರಂಭದಲ್ಲಿ ಶಾಲೆಯಲ್ಲಿ ಸ್ಕಾರ್ಫ್ ಧರಿಸುವಂತಿಲ್ಲ ಎಂದಿದ್ದರು. ನಂತರ ತರಗತಿಯೊಳಗೆ ತಲೆಗೆ ಸ್ಕಾರ್ಫ್ ಹಾಕುವಂತಿಲ್ಲ, ಶಾಲೆಯ ಆವರಣದಲ್ಲಿ ಮಾತ್ರ ಹಾಕಬಹುದು ಎಂದು ಹೇಳಿ ಇಬ್ಬರಿಗೂ ಸೂಚನೆ ನೀಡಿದ್ದರು.ಇದನ್ನೂ ಓದಿ:ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಮದುವೆ? ವೈರಲ್ ವಿಡಿಯೋ ನೋಡಿ ಫ್ಯಾನ್ಸ್​ ಖುಷ್​!ಸೂಚನೆ ನೀಡಿದ ನಂತರವೂ ವಿದ್ಯಾರ್ಥಿನಿಯರು ಜೂನ್ 23ರಂದು ಮತ್ತೆ ಹಿಜಾಬ್​ ಧರಿಸಿ ಬಂದಿದ್ದರು. ಈ ವೇಳೆ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರ ನಡುವೆ ವಾಗ್ವಾದ ನಡೆದಿತ್ತು. ಶಾಲಾ ಅಧಿಕಾರಿಗಳು ಪೋಷಕರಿಗೆ ಈ ಘಟನೆ ಬಗ್ಗೆ ತಿಳಿಸದಿದ್ದರೂ ವಿದ್ಯಾರ್ಥಿನಿಯರು ಮನೆಯಲ್ಲಿ ಈ ವಿಷಯದ ಕುರಿತಾಗಿ ಮಾಹಿತಿ ನೀಡಿದ್ದರು.ನಂತರ ಪೋಷಕರ ಸಲಹೆಯ ಮೇರೆಗೆ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದು, ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
