ಹೈದರಾಬಾದ್:ದೇಶಾದ್ಯಂತ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದಾ ಅನಾಹುತಗಳು ಸೃಷ್ಟಿಯಾಗಿದ್ದು, ಜನ-ಜೀವನ ಹೇಳತೀರದು.ಕೆಲವೆಡೆ ಶಾಲೆ-ಕಚೇರಿಗಳಿಗೂ ಹೋಗದ ಪರಿಸ್ಥಿತಿ ಎದುರಾಗಿದೆ.
ಭಾರೀ ಮಳೆಯಿಂದಾಗಿ ತೆಲಂಗಾಣ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ತಿಳಿಸಿದ್ದಾರೆ.
ಈ ಬಗ್ಗೆ ಸಚಿವ ಸಂಪುಟ ನಡೆಸಿದ ಮುಖ್ಯಮಂತ್ರಿ ಶಾಲೆಗಳಿಗೆ ರಜೆ ಘೋಷಿಸಲು ಸೂಚನೆ ನೀಡಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ತುರ್ತು ಪರಿಹಾರ ನೀಡಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮಳೆ ಅವಾಂತರದಿಂದ ಸೃಷ್ಟಿಯಾಗಿರುವ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿದ ಸಿಎಂ, ಅಗತ್ಯ ಕ್ರಮ ಕೈಗೊಳ್ಳಲು ಹೇಳಿದ್ದಾರೆ.
ಜಯಶಂಕರ್​ಭೂಪಲಪಲ್ಲಿ, ಮಂಚೇರಿಯಲ್​,ನಿರ್ಮಲ್​, ನಿಜಾಮಾಬಾದ್​,ಪೆದ್ದಪಲ್ಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.(ಏಜೆನ್ಸೀಸ್​)
ಶೀಘ್ರದಲ್ಲೇ ಕೊನೆಯಾಗಲಿದೆ ವರ್ಕ್​​ ಫ್ರಂ ಹೋಮ್​: ಈ ಬಗ್ಗೆ ಟಿಸಿಎಸ್​ ಸಿಇಒ ಗೋಪಿನಾಥನ್​ ಹೇಳಿದ್ದೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × one =
Remember me
