ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಶಾಸಕರಿಗೆ ಬಿಜೆಪಿಗೆ ಸೇರುವಂತೆ ಹಣದ ಆಮಿಷವೊಡ್ಡಿದ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್‌ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ತೆಲಂಗಾಣ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಈ ಸಮನ್ಸ್ ಜಾರಿ ಮಾಡಿದೆ.
ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ. 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್​.ಸಂತೋಷ್​ಗೆ ಸಮನ್ಸ್ ಜಾರಿಗೊಳಿಸಿರುವ ಎಸ್‌ಐಟಿ, ತಪ್ಪಿದರೆ ಬಂಧನದ ಎಚ್ಚರಿಕೆಯನ್ನೂ ಕೊಟ್ಟಿದೆ.
ತೆಲಂಗಾಣದ ಸೈಬರಾಬಾದ್ ಪೊಲೀಸರು ಅ.26ರಂದು ಅಜೀಜ್‌ನಗರದ ಫಾರ್ಮ್ ಹೌಸ್ ಮೇಲೆ‌ ದಾಳಿ ಮಾಡಿದ್ದಾಗ 15 ಕೋಟಿ ರೂ. ಹಣ ಪತ್ತೆಯಾಗಿತ್ತು. ಅದನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಲಾಗಿತ್ತು‌. ಟಿಆರ್‌ಎಸ್‌ನ ನಾಲ್ವರು ಶಾಸಕರ ಖರೀದಿಗೆ ಈ ಹಣ ತರಲಾಗಿತ್ತು ಎಂಬ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದೇ ಪ್ರಕರಣ ಸಂಬಂಧ ಈಗ ಸಮನ್ಸ್ ಜಾರಿ ಮಾಡಲಾಗಿದೆ.


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 4 =
Remember me
