ತೆಲಂಗಾಣ:ಭಾನುವಾರ (ಡಿ.03) ನಡೆದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ವೇಳೆ ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಭೇಟಿ ಮಾಡಿದ ಹಿನ್ನಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ ಅಂಜನಿ ಕುಮಾರ್ ಅವರನ್ನು ಇದೀಗ ಚುನಾವಣಾ ಆಯೋಗ ಅಮಾನತುಗೊಳಿಸಿದೆ.
ಇದನ್ನೂ ಓದಿ:ರಾಜ್ಯ ಬಿಜೆಪಿ ಸಂಭ್ರಮ, ಕೈ ಸಮಾಧಾನ: ಪಕ್ಷಗಳಿಂದ ನಾನಾ ಸಮೀಕರಣ, ಲೋಕಸಭಾ ಚುನಾವಣೆಗೂ ಸ್ಪಷ್ಟ ಸಂದೇಶ
ತೆಲಂಗಾಣದ ಪೊಲೀಸ್ ಮುಖ್ಯಸ್ಥ ಅಂಜನಿ ಕುಮಾರ್ ಮತ್ತು ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ತೆಲಂಗಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮುನ್ನ ಸ್ಪರ್ಧಿ ಅನುಮುಲಾ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು ರೇವಂತ್​ ರೆಡ್ಡಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸುತ್ತಿರುವುದು ಫೋಟೋದಲ್ಲಿ ಕಂಡುಬಂದಿದೆ.
ಚುನಾವಣಾ ಆಯೋಗವು ತೆಲಂಗಾಣ ಮುಖ್ಯ ಕಾರ್ಯದರ್ಶಿ ಎ.ಶಾಂತಿ ಕುಮಾರಿ ಪತ್ರವನ್ನು ಕಳುಹಿಸಿದ್ದು, ತೆಲಂಗಾಣ ಡಿಜಿಪಿಯನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡಿದೆ. ಇದರ ಬೆನ್ನಲ್ಲೇ ಹಿರಿಯ ಐಪಿಎಸ್ ಅಧಿಕಾರಿ ರವಿ ಗುಪ್ತಾ ಅವರಿಗೆ ಪೊಲೀಸ್ ಮಹಾನಿರ್ದೇಶಕರಾಗಿ ಸಂಪೂರ್ಣ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ಇದನ್ನೂ ಓದಿ:ಇಂದಿನಿಂದ ಚಳಿಗಾಲದ ಅಧಿವೇಶನ ಕಾವೇರಲಿದೆ ಸದನ: ಸರ್ಕಾರದ ಕಿವಿ ಹಿಂಡಲು ಜಂಟಿ ತಯಾರಿ
ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ತೆಲಂಗಾಣದ ಡಿಜಿಪಿ, ಪೊಲೀಸ್ ಪಡೆ (HoPF) ಮುಖ್ಯಸ್ಥರ ಹುದ್ದೆಗೆ ರವಿ ಗುಪ್ತಾ ಅವರನ್ನು ಸಂಪೂರ್ಣ ಹೆಚ್ಚುವರಿ ಉಸ್ತುವಾರಿಯಾಗಿ ವಹಿಸಲಾಗಿದೆ ಎಂದು ತೆಲಂಗಾಣ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ಸರ್ಕಾರಿ ಆದೇಶದಲ್ಲಿ ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜಯ:ತೆಲಂಗಾಣ ಸಿಎಂ ಆದ ಕೆ. ಚಂದ್ರಶೇಖರ ರಾವ್ ಅವರ ಬಿಆರ್​ಎಸ್​ ಪಕ್ಷದೊಟ್ಟಿಗೆ ಭಾರೀ ಪೈಪೋಟಿ ನಡೆಸಿದ ಕಾಂಗ್ರೆಸ್​, ಪಕ್ಷದ ನಾಯಕ ರೇವಂತ್ ರೆಡ್ಡಿ ಮುಂದಾಳತ್ವದಲ್ಲಿ ಗೆಲುವು ದಾಖಲಿಸಿತು. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮತ್ತೊಂದೆಡೆ, ಬಿಆರ್‌ಎಸ್ 39 ಸ್ಥಾನಗಳನ್ನು ಪಡೆದರೆ, ಬಿಜೆಪಿ 9, ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) 7 ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ 1 ಸ್ಥಾನವನ್ನು ಪಡೆದುಕೊಂಡಿದೆ,(ಏಜೆನ್ಸೀಸ್).
ನಿತ್ಯಭವಿಷ್ಯ: ಈ ರಾಶಿಯವರಿಗಿಂದು ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + 3 =
Remember me
