ತೆಲಂಗಾಣ:ತನಗೆ ಇಷ್ಟವಾದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ತಾಯಿಯೊಬ್ಬಳು ತನ್ನ 20 ವರ್ಷದ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಹೊರವಲಯದಲ್ಲಿರುವ ಇಬ್ರಾಹಿಂಪಟ್ಟಣಂನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ
ಮೋಟೆ ಜಂಗಮ್ಮ ಎಂಬ ಮಹಿಳೆ ತನ್ನ ಮಗಳು ಮೋಟೆ ಭಾರ್ಗವಿ (20) ಅನ್ನು ಹತ್ಯೆ ಮಾಡಿ ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾಳೆ. ಆದರೆ, ಮಹಿಳೆಯ ಗಂಟಲಿನ ಮೇಲಿದ್ದ ಗಾಯಗಳು ಭಾರ್ಗವಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎನ್ನುವ ಅನುಮಾನ ಸೃಷ್ಟಿಸಿದೆ.ಮೃತ ಮೋಟೆ ಭಾರ್ಗವಿ ದಿಲ್‌ಸುಖ್‌ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ರಾಚಕೊಂಡ ಪೊಲೀಸರು ತಿಳಿಸಿದ್ದಾರೆ. ಆಕೆಯ ತಾಯಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.
ಇಬ್ರಾಹಿಂಪಟ್ಟಣ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಮಹೇಶ್ವರಂ ಪೊಲೀಸ್ ಉಪ ಕಮಿಷನರ್ (ಡಿಸಿಪಿ) ಸುನಿತಾ ರೆಡ್ಡಿ ತಿಳಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಸೇರಿದಂತೆ ಎಲ್ಲಾ ರೀತಿಯಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.ಮೃತ ಮೋಟೆ ಭಾರ್ಗವಿ ತನ್ನ ತಾಯಿ, ತಂದೆ ಮಲ್ಲಯ್ಯ ಮತ್ತು ಸಹೋದರ ಚರಣ್ ಜೊತೆ ವಾಸಿಸುತ್ತಿದ್ದಳು. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ.
ಘಟನೆಯ ಹಿನ್ನೆಲೆ ಏನು? :ಮಾರ್ಚ್ 18 ಸೋಮವಾರ ಬೆಳಗ್ಗೆ ಮೃತ ತಾಯಿ ಮೋಟೆ ಜಂಗಮ್ಮ ಮತ್ತು ಅವರ ಮಗನ ಜೊತೆ ಗ್ರಾಮದ ವ್ಯಕ್ತಿಯೊಬ್ಬರ ಕೆಲಸಕ್ಕೆಂದು ಹೋಗಿದ್ದಾರೆ. ಭಾರ್ಗವಿಯನ್ನು ಮನೆಯಲ್ಲಿ ಒಬ್ಬಳೇ ಬಿಟ್ಟು ಹೋಗಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಗೆ ಮರಳಿದ ಜಂಗಮ್ಮ, ಭಾರ್ಗವಿ ತನ್ನ ಗೆಳೆಯನೊಂದಿಗೆ ಮಾತನಾಡುತ್ತಿದ್ದುದನ್ನು ನೋಡಿ ಕೋಪಗೊಂಡು ಬೈದಿದ್ದಾಳೆ ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಜಗಳ ನಡೆಯುತ್ತಿರುವುದನ್ನು ನೋಡಿದ ಊರಿನ ಯುವಕನೋರ್ವ ಆಕೆಯ ಸಹೋದರನಿಗೆ ತಿಳಿಸಿದ್ದಾರೆ. ಮನೆಗೆ ಧಾವಿಸಿ, ಆದರೆ ಒಳಗಿನಿಂದ ಬಾಗಿಲು ಮುಚ್ಚಿರುವುದನ್ನು ಕಂಡು. ಕಿಟಕಿಯಿಂದ ಇಣುಕಿ ನೋಡಿದಾಗ ತಾಯಿ ಭಾರ್ಗವಿಯನ್ನು ಸ್ಕಾರ್ಫ್‌ನಿಂದ ಕತ್ತು ಹಿಸುಕಲು ಯತ್ನಿಸುತ್ತಿರುವುದು ಕಂಡು ಬಂದಿದೆ. ನಂತರ ಜೋರಾಗಿ ಬಾಗಿಲು ಬಡಿದ ಜಂಗಮ್ಮ ಬಾಗಿಲು ತೆರೆದು ಭಾರ್ಗವಿ ಕೊರಳಿಗೆ ಸೀರೆ ಕಟ್ಟಿಕೊಂಡು ಬಿದ್ದಿದ್ದಾಳೆ ಎಂದು ಅಳುತ್ತಾ ಹೊರಗೆ ಬಂದಿದ್ದಾಳೆ.
ಜಂಗಮ್ಮ ಮಗ ಘಟನೆ ಕುರಿತು ತನ್ನ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಸ್ಥಳೀಯ ವೈದ್ಯರು ಸ್ಥಳಕ್ಕೆ ಧಾವಿಸಿ ನೋಡಿದಾಗ, ಮಗಳು ಭಾರ್ಗವಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಸಹೋದರ ನೀಡಿದ ದೂರಿನ ಮೇರೆಗೆ ಇಬ್ರಾಹಿಂಪಟ್ಟಣ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಬಾಯ್‌ಫ್ರೆಂಡ್‌ಗಿಂತ ಶ್ರೀಮಂತೆ ಸ್ಮೃತಿ ಮಂದಾನ: ಇವ್ರಿಗೆ ‘ಬಾಯ್ ಫ್ರೆಂಡ್’ ಇದಾನಾ ಎಂದ್ರು ಆರ್‌ಸಿಬಿ ಫ್ಯಾನ್ಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
