ದೆಹಲಿ:ವಿಶ್ವದಾದ್ಯಂತ ಮಿಲಿಯನ್​ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್​ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್​ನ್ನು ನೀಡಲು ಮುಂದಾಗಿದೆ.
ಇದನ್ನೂ ಓದಿ: 20 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ಅಧಿಕಾರಿ
ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಬೆಳಿಗ್ಗೆಯಿಂದ ಹಿಡಿದು ಸಾಯಂಕಾಲವರೆಗೆ ಇಂದಿನ ಯುವಕರು ಸದಾ ಈ ಜಾಲತಾಣಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಹಾಗಾಗಿಯೇ ಟೆಲಿಗ್ರಾಮ್​ ಸ್ಟೋರಿಸ್​​ ಎಂಬ ಫೀಚರ್​​ನ್ನು ಪರಿಚಯಿಸಲು ಮುಂದಾಗಿದೆ.
ಸ್ಟೋರಿಸ್​ಗಳು ನಮ್ಮ ಜೀವನಕ್ಕೆ ಹತ್ತಿರವಾಗಿದ್ದು, ನಮ್ಮ ಜೀವನದ ಸಂಗತಿಗಳ ಬಗ್ಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಇವುಗಳ ಮೂಲಕ ಸ್ನೇಹಿತರು ಸೇರಿದಂತೆ ಸಂಬಂಧಿಕರು ಕೂಡ ತಿಳಿದುಕೊಳ್ಳಬಹುದಾಗಿದೆ. ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್​​, ಟೆಲಿಗ್ರಾಮ್​ ಶೀಘ್ರದಲ್ಲೇ ಸ್ಟೋರಿಸ್​​ ಫೀಚರ್​ನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮೇವು ಬ್ಯಾಂಕ್, ಗೋಶಾಲೆ ತೆರೆಯಲು ಒತ್ತಾಯ: ಉಪ ತಸೀಲ್ದಾರ್ ರೇಣುಕಾಗೆ ಮನವಿ
ಇನ್​ಸ್ಟಾಗ್ರಾಮ್​​ನಲ್ಲಿ ಸ್ಟೋರಿಸ್​​ಗಳು 24 ಗಂಟೆಗಳ ನಂತರ ಸ್ವಯಂಚಾಲಿತವಾಗಿ ಮುಕ್ತಾಯಗೊಳ್ಳುತ್ತವೆ, ಆದರೆ ಟೆಲಿಗ್ರಾಮ್​ನಲ್ಲಿ ಬಳಕೆದಾರರು ತಮ್ಮ ಸ್ಟೋರಿಸ್​​ ಅಪ್​ಲೋಡ್​ ಮಾಡಿದ ನಂತರ ಯಾವಾಗ ಮುಕ್ತಾಯವಾಗಬೇಕು ನಿರ್ಧರಿಸಲು ನಾಲ್ಕು ಆಯ್ಕೆಗಳನ್ನು ಹೊಂದಿರುತ್ತಾರೆ.
ಈ ಸ್ಟೋರಿಸ್​ಗಳು 6, 12, 24, ಹಾಗೂ 48 ಗಂಟೆಗಳ ಮುಕ್ತಾಯ ಅವಧಿಯನ್ನು ಒಳಗೊಂಡಿರುತ್ತದೆ. ಜತೆಗೆ ಬಳಕೆದಾರರು ಟೆಲಿಗ್ರಾಮ್‌ನಲ್ಲಿ ತಮ್ಮ ಪ್ರೊಫೈಲ್ ಪುಟದಲ್ಲಿ ಸ್ಟೋರಿಸ್​​​ಗಳನ್ನು ಶಾಶ್ವತವಾಗಿ ಪ್ರದರ್ಶಿಸಬಹುದಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
