ಬೆಂಗಳೂರು :ಸಿಲಿಕಾನ್​ ಸಿಟಿಯಲ್ಲಿ ಅಕ್ರಮವಾಗಿ ನಡೆಸಲಾಗಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಖ್ಯಾತ ತೆಲುಗು ನಟಿ ಹೇಮಾ ಕೊಲ್ಲಂ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ:ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ : ಹುಡುಕಾಟಕ್ಕೆ ನೆರವು ಕೇಳಿದ ಪೊಲೀಸರು
ನಗರದ ಹೊರವಲಯದಲ್ಲಿ ಇತ್ತೀಚೆಗೆ ನಡೆದಿದ್ದ ರೇವ್​ ಪಾರ್ಟಿಯಲ್ಲಿ ಹೇಮಾ ಡ್ರಗ್ಸ್​​ ಸೇವಿಸಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೆ ನಟಿ, ಇದೆಲ್ಲಾ ಸುಳ್ಳು ಸುದ್ದಿ ನಾನು ಬೆಂಗಳೂರಿನಲ್ಲಿಲ್ಲ. ಹೈದರಾಬಾದ್​​ ರೆಸಾರ್ಟ್​​ವೊಂದರಲ್ಲಿ ಇದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದರು.
ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದು ನಟಿ ಹೇಮಾಸಿಸಿಬಿ ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದರು. ಬಳಿಕತಾನು ಡ್ರಗ್ಸ್​​ ಸೇವಿಸಿಲ್ಲ ಎಂದು ಅವಾಜ್​ ಹಾಕಿ, ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನವನ್ನೂ ಮಾಡಿದ್ದರು. ಆದರೆ ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಳ್ಳಲಾಗದೇ ಕೊನೆಗೆ ರಕ್ತದ ಮಾದರಿ ಕೊಟ್ಟು ಅಲ್ಲಿಂದ ಹೊರಟಿದ್ದರು.
ದಾಳಿ ನಡದ ಬಳಿಕ ಬೆಂಗಳೂರಿನ ಸಿಸಿಬಿ ಪೊಲೀಸರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಜನರ ರಕ್ತದ ಮಾದರಿ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ನಟಿ ಹೇಮಾ ಸೇರಿದಂತೆ 86 ಮಂದಿ ಡ್ರಗ್ಸ್ ಸೇವನೆ ಮಾಡಿರುವುದು ರಕ್ತದ ಮಾದರಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟಿ ಹೇಮಾಗೆ ನೋಟಿಸ್​ ಜಾರಿ ಮಾಡಿದ್ದರು. ಆದರೆ ವಿಚಾರಣೆಗೆ ಗೈರಾಗಿದ್ದರು. ಬಳಿಕ ಸಿಸಿಬಿ ಪೊಲೀಸರು ನಟಿ ಹೇಮಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ಯ ಬಂಧಿಸಿರುವುದು ಸಂಜೆಯಾಗಿರುವುದರಿಂದ ಕೋರ್ಟ್​ ಅವಧಿ ಮುಗಿದಿರುವುದರಿಂದ ನಟಿಯನ್ನು ಮಂಗಳವಾರ (ಜೂನ್​ 4) ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.(ಏಜೆನ್ಸೀಸ್​​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × four =
Remember me
