ಜೈಪುರ:ದೇವಾಲಯದ ಅರ್ಚಕನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರ ಬಳಿಯ ರಾಸಲ್​ ಗ್ರಾಮದಲ್ಲಿ ನಡೆದಿದೆ.ಮೋಹನ್ ದಾಸ್(75) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಆತ ವಾಸಿಸುವ ಕೋಣೆಯಲ್ಲಿಯೇ ಮೃತದೇಹ ತ್ತೆಯಾಗಿದೆ. ಪೊಲೀಸರು ಬಂದು ನೋಡಿದಾಗ ಮೃತದೇಹ ಛಿದ್ರಗೊಂಡ ಸ್ಥಿತಿಯಲ್ಲಿ ಬಿದ್ದಿದ್ದು, ಮೃತದೇಹದ ಬಾಯಿ ಮತ್ತು ಕೈಕಾಲುಗಳನ್ನು ಕಟ್ಟಿಹಾಕಲಾಗಿದೆ.ಇದನ್ನೂ ಓದಿ:70 ಅಡಿಯ ಕಂದಕದಲ್ಲಿ ಸಿಲುಕಿದ ಕಾರ್ಮಿಕ: 45 ಗಂಟೆಗಳ ಕಾರ್ಯಾಚರಣೆ ನಡೆಸಿದ ರಕ್ಷಣಾ ಸಿಬ್ಬಂದಿ..ಅರ್ಚಕನು ಕಳೆದ 15 ವರ್ಷಗಳಿಂದ ರಾಸಲ್ ಗ್ರಾಮದಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದನು. ಭಾನುವಾರ ರಾತ್ರಿ ಊಟ ಮುಗಿಸಿ ಪೂಜಾರಿ ಮಲಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಮಲಗುವ ಮುನ್ನ ಸಮೀಪದ ಕೆಲ ಗ್ರಾಮಸ್ಥರೊಂದಿಗೆ ಮಾತನಾಡಿದ್ದರು. ಆದರೆ, ಇದಾದ ಬಳಿಕ ನಡೆದಿದ್ದಾರೂ ಏನು? ಆತನನ್ನು ಬರ್ಬರವಾಗಿ ಕೊಂದವರು ಯಾರು? ಎಂಬುದು ಸ್ಪಷ್ಟವಾಗಿಲ್ಲ.ಅರ್ಚಕನ ಮೃತದೇಹದ ಸ್ಥಿತಿ ನೋಡಿ ಇದೊಂದು ಕೊಲೆ ಎಂದು ಪೊಲೀಸರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದ್ದು, ಈತನ ಕುಟುಂಬವು ಅದೇ ಗ್ರಾಮದಲ್ಲಿ ಬೇರೆ ಬೇರೆ ಸ್ಥಳದಲ್ಲಿ ವಾಸಿಸುತ್ತಿದೆ. ಹತ್ಯೆಯ ಹಿಂದಿನ ಉದ್ದೇಶ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
