ಡೆಹ್ರಾಡೂನ್:ಉತ್ತರಾಖಂಡದ ರುದ್ರಪ್ರಯಾಗ ಬದ್ರಿನಾಥ್ ಹೆದ್ದಾರಿ ಬಳಿ ಟೆಂಪೋ ಟ್ರಾವೆಲರ್ ಆಳವಾದ ಕಂದರಕ್ಕೆ ಬಿದ್ದು ಎಂಟು ಮಂದಿ ಮೃತಪಟ್ಟಿದ್ದಾರೆ. ಟೆಂಪೋವಿನಲ್ಲಿ ಸುಮಾರು 17 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ:ಸಾಮಾಜಿಕ ಜಾಲತಾಣದಿಂದ ವಿಚಾರಣೆ ವಿಡಿಯೋವನ್ನು ತೆಗೆದುಹಾಕಿ; ಸಿಎಂ ಕೇಜ್ರಿವಾಲ್​ ಪತ್ನಿಗೆ ದೆಹಲಿ ಹೈಕೋರ್ಟ್​​ ಸೂಚನೆ
ಘಟನೆ ನಡೆದಿರುವ ಸ್ಥಳದಲ್ಲಿ ಪ್ರಸ್ತುತ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯವನ್ನು ನಡೆಸುತ್ತಿವೆ ಎನ್ನಲಾಗಿದೆ. ಇದುವರೆಗೂ ಇಬ್ಬರು ಗಾಯಗೊಂಡವರನ್ನು ರಕ್ಷಣಾ ತಂಡಗಳು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದೆ ಎಂದು ಹೇಳಲಾಗುತ್ತಿದೆ.
VIDEO | Uttarakhand: Around eight people lost their lives after a tempo, they were travelling in, fell into a gorge on Rishikesh-Badrinath national highway. More details are awaited.
(Full video available on PTI Videos –https://t.co/n147TvqRQz)pic.twitter.com/DrcaPhTfBX
— Press Trust of India (@PTI_News)June 15, 2024

ರುದ್ರಪ್ರಯಾಗ ಜಿಲ್ಲೆಯಲ್ಲಿ ಸಂಭವಿಸಿರುವ ಟೆಂಪೋ ಅಪಘಾತದ ಸುದ್ದಿ ಕೇಳಿ ದುಃಖವಾಗಿದೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ. ಮೃತ ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದರು. (ಏಜೆನ್ಸೀಸ್​​)
ಇಬ್ಬರು ಮಾಜಿ ಮುಖ್ಯಮಂತ್ರಿಗಳಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
