ನವದೆಹಲಿ:ಬಿಜೆಪಿ ಪ್ರಾಬಲ್ಯ ಹೊಂದಿರದ 144 ಕ್ಷೇತ್ರಗಳನ್ನು ಗುರುತಿಸಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ 10 ಸೂತ್ರಗಳನ್ನು ಪಕ್ಷ ಸಿದ್ಧಪಡಿಸಿದೆ. 2019ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಎರಡನೇ ಸ್ಥಾನಗಳಿಸಿದ 144 ಸ್ಥಾನಗಳನ್ನು ದುರ್ಬಲವೆಂದು ಗುರುತಿಸಲಾಗಿದ್ದು, ಇಲ್ಲಿ ಗೆಲುವಿನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ರಣತಂತ್ರ ಇದಾಗಿದೆ.
ನರೇಂದ್ರ ಮೋದಿ ಸರ್ಕಾರದ 8ನೇ ವರ್ಷ ಸಂಭ್ರಮಾಚರಣೆಯ ಅಂಗವಾಗಿ ‘ಸೇವೆ, ಸುಶಾಸನ, ಬಡವರ ಕಲ್ಯಾಣ’ ಧ್ಯೇಯ ವ್ಯಾಕ್ಯದೊಂದಿಗೆ ಮೇ 30ರಿಂದ ಜೂನ್ 15ರವರೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದ ಭಾಗವಾಗಿ ದುರ್ಬಲವೆಂದು ಗುರುತಿಸಲಾದ ಲೋಕಸಭಾ ಕ್ಷೇತ್ರಗಳಿಗೆ ಕೇಂದ್ರ ಸಚಿವರು ಭೇಟಿ ನೀಡಲಿದ್ದು, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಜತೆ ರ್ಚಚಿಸಲಿದ್ದಾರೆ. ನಂತರದ ದಿನಗಳಲ್ಲಿ ಪಕ್ಷದ ಹಿರಿಯ ನಾಯಕರೂ ಭೇಟಿ ನೀಡಲಿದ್ದಾರೆ. ಬೂತ್ ಮಟ್ಟದಿಂದ ಪಕ್ಷದ ಬಲವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ಗುರುವಾರ ರ್ಯಾಲಿಯೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ರ ಕುಟುಂಬ ರಾಜಕಾರಣದ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ವಂಶ ರಾಜಕಾರಣದ ಪಕ್ಷಗಳಿಂದಾಗಿ ದೇಶದ ಯುವಜನರಿಗೆ ರಾಜಕೀಯದಲ್ಲಿ ಅವಕಾಶ ಸಿಗುತ್ತಿಲ್ಲ. ‘ಪರಿವಾರವಾದಿ’ ಪಕ್ಷಗಳು ತಮ್ಮ ಅಭಿವೃದ್ಧಿ ಬಗ್ಗೆ ಮಾತ್ರವೇ ಚಿಂತಿಸುತ್ತವೆ. ಅವುಗಳು ಬಡವರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಒಂದು ಕುಟುಂಬ ಮಾತ್ರವೇ ಅಧಿಕಾರದಲ್ಲಿದ್ದು ಎಷ್ಟು ಲೂಟಿ ಹೊಡೆಯಬಹುದು ಎನ್ನುವುದಷ್ಟೇ ಅವುಗಳ ಯೋಚನೆಯಾಗಿರುತ್ತದೆ’ ಎಂದು ಮೋದಿ ಹೇಳಿದರು. ಕುಟುಂಬ-ಆಧಾರಿತ ರಾಜಕಾರಣವು ಒಂದು ರಾಜಕೀಯ ಸಮಸ್ಯೆ ಮಾತ್ರವೇ ಅಲ್ಲ. ಅದು ‘ಪ್ರಜಾಪ್ರಭುತ್ವದ ಅತಿ ದೊಡ್ಡ ಶತ್ರುವಾಗಿದೆ’ ಎಂದು ಪ್ರಧಾನಿ ಪ್ರತಿಪಾದಿಸಿದರು.
ಮೀಸಲಾತಿ ರದ್ದತಿ ಭರವಸೆ:ಬಿಜೆಪಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರ ಮೀಸಲಾತಿಯನ್ನು ರದ್ದುಮಾಡಲಾಗುತ್ತದೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮೇಲ್ಜಾತಿಗಳ ಬಡವರಿಗೆ ಅನುಕೂಲ ಒದಗಿಸಲಾಗುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಬುಧವಾರ ಹೇಳಿದ್ದಾರೆ. ಪ್ರಖರ ಹಿಂದುತ್ವವಾದಿಯಾದ ಕುಮಾರ್, ಧಾರ್ವಿುಕ ಮತಾಂತರ ಮತ್ತು ಲವ್ ಜಿಹಾದ್ ವಿರುದ್ಧ ಕೆಲಸ ಮಾಡುವುದಾಗಿಯೂ ಪಣತೊಟ್ಟರು.
ಚೆನ್ನೈ:ಹಲವು ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಹಾಗೂ ಆರಂಭಕ್ಕೆ ಗುರುವಾರ ತಮಿಳುನಾಡಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ತಮಿಳು ಭಾಷೆ ಹಾಗೂ ಸಂಸ್ಕೃತಿಯನ್ನು ಶ್ಲಾಘಿಸಿದರು. 31,400 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಮೋದಿ ’ತಮಿಳು ಭಾಷೆ ಶಾಶ್ವತವಾದುದು ಹಾಗೂ ಅದರ ಸಂಸ್ಕೃತಿ ಜಾಗತಿಕವಾದುದು’ ಎಂದು ಹೇಳಿದರು. ಚೆನ್ನೈನಿಂದ ಕೆನಡಾವರೆಗೆ ಮಧುರೆಯಿಂದ ಮಲೇಷ್ಯಾ ವರೆಗೆ ನಮಕ್ಕಲ್​ನಿಂದ ನ್ಯೂಯಾರ್ಕ್ ವರೆಗೆ ಹಾಗೂ ಸೇಲಂನಿಂದ ದಕ್ಷಿಣ ಆಫ್ರಿಕಾವರೆಗೆ ಜಗದಗಲದಲ್ಲಿ ಪೊಂಗಲ್ ಮತ್ತು ಪೂತಂಡು ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಮೋದಿ ಹೇಳಿದರು. ಕಳೆದ ವರ್ಷ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿ.ಎಂ.ಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೋದಿಯವರ ಪ್ರಥಮ ತಮಿಳುನಾಡು ಭೇಟಿ ಇದಾಗಿದೆ. ಚೆನ್ನೈ-ಬೆಂಗಳೂರು ಎಕ್ಸ್​ಪ್ರೆಸ್ ಹೈವೇ ಸಹಿತ ಹಲವು ಮಹತ್ವದ ಮೂಲಸೌಕರ್ಯ ಯೋಜನೆಗಳಿಗೆ ಮೋದಿ ಚಾಲನೆ ನೀಡಿದರು. ನೂರಾರು ಬಿಜೆಪಿ ಕಾರ್ಯಕರ್ತರು ರಸ್ತೆಗಳ ಇಕ್ಕೆಲಗಳಲ್ಲಿ ನಿಂತು ಮೋದಿ ಪರ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು ಹಾಗೂ ಘೋಷಣೆಗಳನ್ನು ಕೂಗಿದರು.
ನವದೆಹಲಿ:ಭಾರತದ ಅತಿದೊಡ್ಡ ಡ್ರೋನ್ ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ರೈತ ಡ್ರೋನ್ ಪೈಲಟ್​ಗಳ ಜೊತೆಗೆ ಸಂವಾದ ನಡೆಸಲಿದ್ದು, ಡ್ರೋನ್ ಹಾರಾಟವನ್ನೂ ಅವರು ವೀಕ್ಷಿಸಲಿದ್ದಾರೆ. ಭಾರತ್ ಡ್ರೋನ್ ಮಹೋತ್ಸವ 2022 ಎರಡು ದಿನದ ಕಾರ್ಯಕ್ರಮವಾಗಿದ್ದು, ಮೇ 27 ಮತ್ತು 28 ರಂದು ನಡೆಯಲಿದೆ. ಮೇ 27 ರಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಸರ್ಕಾರಿ ಅಧಿಕಾರಿಗಳು, ವಿದೇಶಿ ಪರಿಣಿತರು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಡ್ರೋನ್ ಸ್ಟಾರ್ಟಪ್​ಗಳು ಸೇರಿ 1600 ನಿಯೋಗಗಳು ಈ ಹಬ್ಬದಲ್ಲಿ ಭಾಗವಹಿಸಲಿವೆ.
ತಮಿಳಿಗೂ ಅಧಿಕೃತ ಭಾಷೆ ಸ್ಥಾನಕ್ಕೆ ಆಗ್ರಹ:ಪ್ರಧಾನಿ ಮೋದಿಯವರೊಂದಿಗೆ ವೇದಿಕೆಯಲ್ಲಿದ್ದ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಹಿಂದಿಯಂತೆ ತಮಿಳಿಗೂ ಅಧಿಕೃತ ಭಾಷೆಯ ಸ್ಥಾನಮಾನ ಒದಗಿಸುವಂತೆ ಆಗ್ರಹಿಸಿದರು. ಮದ್ರಾಸ್ ಹೈಕೋರ್ಟ್​ನಲ್ಲಿ ತಮಿಳನ್ನು ಅಧಿಕೃತ ಭಾಷೆಯಾಗಿ ಮಾಡಬೇಕೆಂದು ಒತ್ತಾಯಿಸಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 − two =
Remember me
