ಪಲಕ್ಕಾಡ್​/ಮೈಸೂರು:ಪ್ರಸ್ತುತ ದಿನಗಳಲ್ಲಿ ಹೃದಯಾಘಾತವು ಕೂಡ ಒಂದು ಟ್ರೆಂಡಿಂಗ್ ವಿಷಯವಾಗಿದೆ. ಈ ಹೃದಯಾಘಾತ ಯಾವಾಗ? ಯಾರಿಗೆ? ಹೇಗೆ? ಬರುತ್ತದೋ ಗೊತ್ತಿಲ್ಲ. ಆಟವಾಡುತ್ತಿರುವಾಗಲೇ ಕುಸಿದು ಬಿದ್ದು, ಆಸ್ಪತ್ರೆಗೆ ಬರುವಷ್ಟರಲ್ಲಿ ಹೃದಯಾಘಾತದಿಂದ ಸಾಯುವವರೂ ಇದ್ದಾರೆ. ನಿದ್ದೆ ಮಾಡುವಾಗ, ಟಿವಿ ನೋಡುವಾಗ ಹೃದಯಾಘಾತಗಳು ಸಂಭವಿಸುತ್ತಿವೆ. ದಿನಕ್ಕೆ ನಾಲ್ಕೈದು ಹೃದಯಾಘಾತದ ಸುದ್ದಿಗಳನ್ನು ಕೇಳುತ್ತಿದ್ದೇವೆ. ಅದರಲ್ಲೂ ಕರೊನಾ ನಂತರ ಹೃದಯಾಘಾತಗಳ ಸಂಖ್ಯೆ ಹೆಚ್ಚಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳವಳಕಾರಿ ವಿಚಾರ ಏನೆಂದರೆ, ಚಿಕ್ಕಮಕ್ಕಳು ಕೂಡ ಇದಕ್ಕೆ ಬಲಿಯಾಗುತ್ತಿದ್ದಾರೆ.
ಇದೀಗ ಶಾಲಾ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಕೇರಳದಲ್ಲಿ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಶ್ರೀಶಯನ ಎಂದು ಗುರುತಿಸಲಾಗಿದೆ. ಈಕೆ ಪಲಕ್ಕಾಡ್​ನ ಪುಲಪಟ್ಟದಲ್ಲಿರುವ ಎನ್​. ಕೆ.ಎಂ. ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಿನ್ನೆ (ನ.06) ರಾತ್ರಿ ಮೈಸೂರು ಅರಮನೆಯನ್ನು ನೋಡಿಕೊಂಡು ವಾಪಸ್​ ಬರುವಾಗ ಶ್ರೀಶಯನಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದಾದರೂ ಆಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಮೂರು ಬಸ್​ಗಳಲ್ಲಿ 135 ವಿದ್ಯಾರ್ಥಿಗಳು ಮತ್ತು 15 ಶಿಕ್ಷಕರ ಸೇರಿ ಒಟ್ಟು 150 ಮಂದಿ ಮೈಸೂರು ಪ್ರವಾಸ ಕೈಗೊಂಡಿದ್ದರು. ಇದೀಗ ವಿದ್ಯಾರ್ಥಿನಿ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ. ಎಲ್ಲ ಬಸ್​ಗಳು ಕೇರಳಕ್ಕೆ ಮರಳಿವೆ.(ಏಜೆನ್ಸೀಸ್​)
ಕೇವಲ 24 ಗಂಟೆಗಳಲ್ಲಿ 13ರ ಬಾಲಕ ಸೇರಿ 10 ಮಂದಿ ಹೃದಯಾಘಾತಕ್ಕೆ ಬಲಿ: ಗಾರ್ಬಾ ಸಂಭ್ರಮದ ವೇಳೆ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
