ನವದೆಹಲಿ:ಉತ್ತರಾಖಂಡದ 12ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ 8 ಶಾಸಕರೂ ಮಂತ್ರಿಗಳಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಧಾಮಿ ಖತಿಮಾ ಕ್ಷೇತ್ರದಿಂದ ಚುನಾವಣೆ ಸೋತರೂ ಪಕ್ಷ ಚುನಾವಣೆ ಗೆಲ್ಲುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ಈ ಹಿನ್ನೆಲೆಯಲ್ಲಿ ದಿಲ್ಲಿ ನಾಯಕರು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಧಾಮಿ ಮುಂದುವರಿಸುವ ತೀರ್ಮಾನ ಕೈಗೊಂಡಿದ್ದರು.
ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಲ್ಲಿ 3 ಬ್ರಾಹ್ಮಣ, 3 ಠಾಕೂರ್, ಇಬ್ಬರು ದಲಿತ ಮತ್ತು ಓರ್ವ ವೈಶ್ಯ ಸಮುದಾಯಕ್ಕೆ ಸೇರಿದ್ದಾರೆ. ಸಂಪುಟದಲ್ಲಿ ಇನ್ನೂ ಮೂರು ಸ್ಥಾನ ಖಾಲಿ ಇದೆ. ಕಳೆದ ಅವಧಿಯಲ್ಲಿ ಸ್ಪೀಕರ್ ಆಗಿದ್ದ ಪ್ರೇಮ್ ಚಂದ್ ಅಗರ್ವಾಲ್​ರನ್ನು ಈ ಬಾರಿ ಮಂತ್ರಿಯನ್ನಾಗಿ ಮಾಡಲಾಗಿದೆ.

ಸಂಘದ ಹಿನ್ನೆಲೆಯ ಧಾಮಿ: 46 ವರ್ಷದ ಧಾಮಿ ಠಾಕೂರ್ ಸಮುದಾಯಕ್ಕೆ ಸೇರಿದವರು. 33 ವರ್ಷಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಅದರ ಅಂಗಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಉತ್ತರಾಖಂಡ ಬಿಜೆಪಿ ಯುವ ಮೋರ್ಚಾದಲ್ಲಿ 2002ರಿಂದ 2008ರ ತನಕ ಕಾರ್ಯನಿರ್ವಹಿಸಿದ್ದ ಧಾಮಿ, 2001ರಿಂದ 2002ರ ತನಕ ರಾಜ್ಯದ ಮೊದಲ ಸಿಎಂ ಆಗಿದ್ದ ಭಗತ್ ಸಿಂಗ್ ಕೋಶಿಯಾರಿ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದರು. 2012 ಮತ್ತು 17ರಲ್ಲಿ ಖತಿಮಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯದಲ್ಲಿ ಬಿಜೆಪಿ ಮರು ಆಯ್ಕೆಯಾದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಧಾಮಿ ಚುನಾವಣೆಗೆ ಮುನ್ನ ಘೋಷಿಸಿದ್ದರು. ಈಗ ಈ ಘೋಷಣೆ ಈಡೇರಿಸುವ ಸವಾಲು ಮುಂದಿದೆ.

ಕೇಜ್ರಿವಾಲ್ ಸವಾಲುದಿಲ್ಲಿಯ ಉತ್ತರ, ಪೂರ್ವ ಮತ್ತು ಪಶ್ಚಿಮ ಭಾಗದ ಪಾಲಿಕೆಗಳನ್ನು ವಿಲೀನಗೊಳಿಸುವ ವಿಧೇಯಕ ವಿರೋಧಿಸಿರುವ ಆಪ್ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಪಾಲಿಕೆ ಚುನಾವಣೆಗಳನ್ನು ಸರಿಯಾದ ಸಮಯಕ್ಕೆ ನಡೆಸಿ ಬಿಜೆಪಿ ಗೆಲುವು ಸಾಧಿಸಿದರೆ ನಮ್ಮ ಪಕ್ಷರಾಜಕೀಯ ಸನ್ಯಾಸ ತೆಗೆದುಕೊಳ್ಳಲಿದೆ ಎಂದು ಸವಾಲು ಹಾಕಿದ್ದಾರೆ.
ಸಂಪಾದಕೀಯ | ಜನಸ್ನೇಹಿ ನಿರ್ಧಾರ; ಟೋಲ್ ವ್ಯವಸ್ಥೆಯಲ್ಲಿ ಬದಲಾವಣೆ

ಇತಿಹಾಸ ಬರೆದ ಬಾಂಗ್ಲಾದೇಶ; ತವರಲ್ಲೇ ಮುಗ್ಗರಿಸಿದ ದಕ್ಷಿಣ ಆಫ್ರಿಕಾ

ಜೂನ್‌ನಲ್ಲಿ ಸಿಇಟಿ ಪರೀಕ್ಷೆ; ನಾಡಿದ್ದೇ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 7 =
Remember me
