ಚಂಡೀಗಢ:ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವಾಗಲೇ, ಸ್ವಾತಂತ್ರ್ಯೋತ್ಸವದ ಹಿಂದಿನ ದಿನವೇ ಪಾಕ್ ಬೆಂಬಲಿತ ನಾಲ್ವರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಪಂಜಾಬ್ ಪೊಲೀಸರು ಈ ನಾಲ್ವರನ್ನು ಬಂಧಿಸಿದ್ದಾಗಿ ಭಾನುವಾರ ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಪಂಜಾಬ್ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐಎಸ್​ಐ ಬೆಂಬಲಿತ ನಾಲ್ವರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಪಂಜಾಬ್​, ಹರಿಯಾಣ ಹಾಗೂ ಚಂಡೀಗಢಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ಬಂದೋಬಸ್ತ್ ಮತ್ತಷ್ಟು ಹೆಚ್ಚಿಸಲಾಗಿದೆ.
ಕೆನಡದಲ್ಲಿ ನೆಲೆ ಹೊಂದಿರುವ ಆರ್ಷ್ ಡಲ್ಲ ಹಾಗೂ ಆಸ್ಟ್ರೇಲಿಯಾದಲ್ಲಿ ನೆಲೆ ಹೊಂದಿರುವ ಗುರ್ಜಂಟ್ ಸಿಂಗ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ನಾಲ್ವರಿಂದ 3 ಹ್ಯಾಂಡ್ ಗ್ರೆನೇಡ್ (ಪಿ-86), ಒಂದು ಐಇಡಿ, 2-9ಎಂಎಂ ಪಿಸ್ತೂಲ್​ ಹಾಗೂ 40 ಜೀವಂತ ಕಾರ್ಟ್ರಿಡ್ಜ್​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಹಿಮಪಾತಕ್ಕೆ ಸಿಲುಕಿದ್ದ ಯೋಧನ ಅವಶೇಷ 38 ವರ್ಷಗಳ ಬಳಿಕ ಪತ್ತೆ!
‘ನನ್ನನ್ಯಾರೋ ಕೊಲೆ ಮಾಡ್ತಾರೆ’ ಎಂದು ಪೊಲೀಸರಿಗೆ ಆಗಾಗ ಕರೆ ಮಾಡ್ತಿದ್ದ ಮಹಿಳೆಯ ಕೊಲೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 9 =
Remember me
