ನವದೆಹಲಿ:ಜಮ್ಮು- ಕಾಶ್ಮೀರದ ರಾಜೌರಿಯಲ್ಲಿ ಬುಧವಾರ ನಡೆದ ಎನ್​ಕೌಂಟರ್​ನಲ್ಲಿ ಸೇನೆಯ ನಾಲ್ವರು ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇವರಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಇಬ್ಬರು ಸೈನಿಕರಾಗಿದ್ದಾರೆ. ಧರ್ಮಸಾಲ್​ನ ಬಾಜಿಮಲ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತ್ತು.
ಕಾಡಿನಲ್ಲಿ ಅಡಗಿದ್ದ ಉಗ್ರರು, ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆದರು. ಈ ಮೂಲಕ ಎನ್​ಕೌಂಟರ್ ಆರಂಭವಾಯಿತು. ಗುಂಡಿನ ಚಕಮಕಿ ವೇಳೆ ಉಗ್ರರಿಗೂ ಗಾಯವಾಗಿದೆ. ಈ ಪ್ರದೇಶವನ್ನು ಸುತ್ತವರಿದಿರುವ ಭದ್ರತಾ ಪಡೆ ಉಗ್ರರಿಗೆ ಹುಡುಕಾಟ ನಡೆಸುತ್ತಿದೆ. ನ. 19ರಂದು ಕಲಕೋಟ್ ಪ್ರದೇಶದ ಅರಣ್ಯದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಅಂದಿನಿಂದ ಈ ಪ್ರದೇಶದಲ್ಲಿ ನಿರಂತರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ಲಷ್ಕರ್ ಉಗ್ರರ ಬಂಧನ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಬುಧವಾರ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಅವರಿಂದ 2 ಪಿಸ್ತೂಲ್​ಗಳು, 4 ಮ್ಯಾಗಜಿನ್​ಗಳು ಮತ್ತು 8 ಗ್ರೆನೇಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮುಮ್ತಾಜ್ ಅಹ್ಮದ್ ಲೋನ್ ಮತ್ತು ಜಹಾಂಗೀರ್ ಅಹ್ಮದ್ ಲೋನ್ ಕುಪ್ವಾರದ ನಿವಾಸಿಗಳು.
ಉಗ್ರ ಚಟುವಟಿಕೆ ಏರಿಕೆ?ಕಾಶ್ಮೀರದಲ್ಲಿ ನವೆಂಬರ್ ತಿಂಗಳಲ್ಲಿ ನಡೆದ ಎರಡನೇ ದೊಡ್ಡ ಉಗ್ರ ದಾಳಿ ಇದಾಗಿದೆ. ಜಮ್ಮು – ಕಾಶ್ಮೀರಕ್ಕೆ ಸ್ವಾಯತ್ತೆ ನೀಡುವ 370ನೇ ವಿಧಿ ರದ್ದು ಪಡಿಸಿದ ನಂತರ ಇಲ್ಲಿ ಉಗ್ರ ಚಟುವಟಿಕೆ ಗಣನೀಯವಾಗಿ ಇಳಿಕೆ ಕಂಡಿತ್ತು. ಆದರೆ ಈಗ ಮತ್ತೆ ಏರಿಕೆ ಕಾಣುತ್ತಿರುವುದು ಕಳವಳ ಮೂಡಿಸಿದೆ. ನ. 17ರಂದು ನಡೆದ ಎರಡು ಪ್ರತ್ಯೇಕ ಎನ್​ಕೌಂಟರ್​ನಲ್ಲಿ 6 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ರಜೌರಿ ಮತ್ತು ಕುಲ್ಗಾಮ್ಲ್ಲಿ ಎನ್​ಕೌಂಟರ್ ನಡೆದಿತ್ತು.
ಎಸ್​ಪಿ ಕಚೇರಿಯ ಕೊಠಡಿಯಲ್ಲಿ ಏಕಾಂತದಲ್ಲಿ ಮೈಮರೆತಿದ್ದ ಪೊಲೀಸ್​ ಜೋಡಿಗೆ ಮಧ್ಯರಾತ್ರಿ ಕಾದಿತ್ತು ಶಾಕ್​!

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಲೋಕಾಯುಕ್ತ ಎಂಟ್ರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 14 =
Remember me
