ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರ ಮೃತದೇಹಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ (ಜೂನ್​​ 22) ನಡೆದ ಕಾರ್ಯಾಚರಣೆಯಲ್ಲಿ ಹತರಾಗಿದ್ದ ಇಬ್ಬರು ಭಯೋತ್ಪಾದಕರ ಮೃತದೇಹಗಳನ್ನು ಭಾನುವಾರದಂದು (ಜೂನ್​ 23) ವಶಪಡಿಸಿಕೊಂಡಿದ್ದಾರೆ.
ಇದನ್ನು ಓದಿ:ಕೇಂದ್ರ ಸರ್ಕಾರದಿಂದ ಪರೀಕ್ಷಾ ಕಾನೂನು ಜಾರಿ; ಕಾಂಗ್ರೆಸ್​ ನಾಯಕ ಜೈರಾಮ್​​ ರಮೇಶ್​ ಹೇಳಿದ್ದೇನು?
ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ ಬಳಿಯ ಗೋಹಲನ್ ಪ್ರದೇಶದಲ್ಲಿ ಶನಿವಾರದಂದು ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಟುವಟಿಕೆಯನ್ನು ಸೇನಾ ಸಿಬ್ಬಂದಿ ಗಮನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದನ್ನು ಪ್ರಶ್ನಿಸಿದಾಗ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು. ನಂತರ ಸೇನೆಯು ಪ್ರತಿದಾಳಿ ನಡೆಸಬೇಕಾಯಿತು. ಕೆಲಕಾಲ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದ್ದು ಪ್ರಸ್ತುತ ಅದು ನಿಂತಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು, ಆದರೆ ಈ ಪ್ರದೇಶವು ಎಲ್‌ಒಸಿಗೆ ಹತ್ತಿರದಲ್ಲಿದ್ದರಿಂದ ಅವರ ಮೃತದೇಹಗಳನ್ನು ತಕ್ಷಣವೇ ಮರುಪಡೆಯಲು ಸಾಧ್ಯವಾಗಲಿಲ್ಲ.
ಇದಕ್ಕೂ ಮೊದಲು ಜೂನ್ 19ರಂದು ಉತ್ತರ ಕಾಶ್ಮೀರದ ಸೋಪೋರ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ವೈಷ್ಣೋದೇವಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಚಾಲಕನಿಗೆ ಗುಂಡು ತಗುಲಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಿದೆ. ಅದರಲ್ಲಿದ್ದ 9 ಭಕ್ತರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಇದರ ನಂತರ ಎರಡು ದಿನಗಳಲ್ಲಿ ಜಮ್ಮು ಪ್ರದೇಶದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳು ನಡೆದವು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಭದ್ರತಾ ಪರಿಸ್ಥಿತಿಯ ಅವಲೋಕನ ನಡೆಸಿದ್ದರು. ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಾದ್ಯಂತ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸುತ್ತಿವೆ. ಕಳೆದ ಎರಡು ವಾರಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಅರ್ಧ ಡಜನ್‌ಗಿಂತಲೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ.(ಏಜೆನ್ಸೀಸ್​​)
ಯಾರೀ ಕಂಗನಾ.. ಸುಂದರಿಯೇ? ಎಂಬ ಅಣ್ಣಾ ಕಪೂರ್​​ ಪ್ರಶ್ನೆಗೆ ‘ಕ್ವೀನ್​​’ ಉತ್ತರಿಸಿದ್ದು ಹೀಗೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 2 =
Remember me
