ಶ್ರೀನಗರ:ನಿಷೇಧಿತ ಭಯೋತ್ಪಾದನೆ ಸಂಘಟನೆಯಾದ ದಿ ರೆಸಿಸ್ಟೆನ್ಸ್​ ಫ್ರಂಟ್ (TRF) ಸೇಇದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಗುರುವಾರ ಮುಂಜಾನೆ ಹೊಡೆದುರುಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಕಥೋಹಾಲನ್​ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ.
#ShopianEncounterUpdate: One (01)#terroristaffiliated with proscribed#terroroutfit TRF neutralised. Incriminating materials including arms & ammunition recovered. Search going on. Further details shall follow.@JmuKmrPolicehttps://t.co/Eqq0TQi2wL
ಇದನ್ನೂ ಓದಿ:VIDEO| ಮನುಷ್ಯನನ್ನು ಮುದ್ದಾಡಿದ ಮೊಸಳೆ; ನೋಡಲು ಎಷ್ಟು ಮುದ್ದಾಗಿದೆ ಎಂದ ನೆಟ್ಟಿಗರು
ಭದ್ರತಾ ಪಡೆಗಳು ಕಥೋಹಾಲನ್​ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಗುಂಡಿನ ಕಾಳಗ ಶುರುವಾಗಿದ್ದು, ಓರ್ವನನ್ನು ಸೆದೆ ಬಡಿದಿದ್ದಾರೆ. ಇನ್ನುಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಕಾಶ್ಮೀರ ಪೊಲೀಸರು, ನಿಷೇಧಿತ ಭಯೋತ್ಪಾದಕ ಸಂಘಟನೆ ಜತೆ ಗುರುತಿಸಿಕೊಂಡಿದ್ದ ಓರ್ವನನ್ನು ಕಾರ್ಯಾಚರಣೆ ವೇಳೆ ಎನ್​ಕೌಂಟರ್​ ಮಾಡಲಾಗಿದೆ. ಮೃತನ ಬಳಿ ಇದ್ದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅಡಗಿರುವವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − three =
Remember me
