ನವದೆಹಲಿ:ಸತತ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಅರವಿಂದ್ ಕೇಜ್ರಿವಾಲ್​ ಅವರು ನಗರದಲ್ಲಿ ಬಸ್ಸುಗಳ ಕೊರತೆಯನ್ನು ಶೀಘ್ರವೇ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
ಕಳೆದ 10 ವರ್ಷಗಳ ಅವಧಿಯಲ್ಲಿ ನಗರದಲ್ಲಿ ಸಂಚರಿಸುವ ಬಸ್​ಗಳ ಸಂಖ್ಯೆ 6000ಕ್ಕೆ ಏರಿದೆ. ಆದರೂ ಇನ್ನೂ ಕೊರತೆ ಇದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ಅದಕ್ಕೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ ಅರವಿಂದ್ ಕೇಜ್ರಿವಾಲ್​ ಅವರು, ನಾನು ದೆಹಲಿ ನಿವಾಸಿಗಳಿಗೆ ಭರವಸೆ ನೀಡುತ್ತೇನೆ. ಅತಿ ಶೀಘ್ರದಲ್ಲಿಯೇ ನಗರದಲ್ಲಿ ಬಸ್​ ಸಂಚಾರ ಪ್ರಮಾಣ ಜಾಸ್ತಿಯಾಗಲಿದೆ. ಬಸ್​ಗಳಿಗೆ ಕೊರತೆಯಾಗಲು ಬಿಡುವುದಿಲ್ಲ ಎಂದಿದ್ದಾರೆ.
ದೆಹಲಿಯಲ್ಲಿ 11,000ಕ್ಕೂ ಹೆಚ್ಚು ಬಸ್​ಗಳು ಸಂಚರಿಸುವ ವ್ಯವಸ್ಥೆ ಮಾಡುತ್ತೇವೆ ಹಾಗೂ ದೆಹಲಿ ಮೆಟ್ರೋ ಜಾಲವನ್ನು 500 ಕಿ.ಮೀ.ಗೂ ಜಾಸ್ತಿ ವಿಸ್ತರಣೆ ಮಾಡುವುದಾಗಿ ವಿಧಾನಸಭಾ ಚುನಾವಣೆ ವೇಳೆ ಆಮ್​ ಆದ್ಮಿ ಪಕ್ಷ ಭರವಸೆ ನೀಡಿತ್ತು.(ಪಿಟಿಐ)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
