ಮುಂಬೈ:ಮಹಾರಾಷ್ಟ್ರದಲ್ಲಿ ಸರ್ಕಾರ ಸ್ಥಾಪಿಸಲು ವಿಫಲವಾದ ಬಿಜೆಪಿಗೆ ಇದೀಗ ಮತ್ತೊಮ್ಮೆ ರಾಜ್ಯದಲ್ಲಿ ಹಿನ್ನೆಡೆಯುಂಟಾಗಿದೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ ಕೇವಲ ಒಂದು ಸ್ಥಾನವನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಇದನ್ನೂ ಓದಿ:VIDEO: ಅಂಗಳದಲ್ಲಿ ಬಂದ ಕೋಳಿಗಾಗಿ ಮಾರಾಮಾರಿ… ಬಡಿಗೆ ಹಿಡಿದು ಕಿತ್ತಾಡಿದ ಉಡುಪಿ ಮಂದಿ!
ಆಡಳಿತದಲ್ಲಿರುವ ಶಿವಸೇನೆ, ಕಾಂಗ್ರೆಸ್​ ಮತ್ತು ಎನ್​ಸಿಪಿ ಮೈತ್ರಿ ನಾಲ್ಕು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಉಳಿದ ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಅತ್ಯಂತ ಗಟ್ಟಿ ನೆಲೆ ಎಂದೆನಿಸಿಕೊಂಡಿರುವ ನಾಗ್ಪುರದಲ್ಲಿ ಬಿಜೆಪಿ ಸೋಲುಂಡಿದೆ. ಈ ಕ್ಷೇತ್ರದಲ್ಲಿ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ತಂದೆ ಗಂಗಾಧರ್ ರಾವ್ ಫಡ್ನವೀಸ್ ಪ್ರತಿನಿಧಿಸಿದ್ದರು. 1989 ರಲ್ಲಿ ಮೊದಲ ಬಾರಿಗೆ ಕ್ಷೇತ್ರವನ್ನು ಗೆದ್ದ ಗಡ್ಕರಿ ಅವರು ನಾಲ್ಕು ಬಾರಿ ಇದೇ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
ಇದನ್ನೂ ಓದಿ:ದೇವಸ್ಥಾನದ ಜಾಗ ಅತಿಕ್ರಮಣ ಮಾಡ್ಬೇಡ್ರಿ ಎಂದಿದ್ದಕ್ಕೆ ಯುವಕ ಆಸ್ಪತ್ರೆ ಸೇರಬೇಕಾಯ್ತು!
ಫಡ್ನವೀಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಸೇರಿದಂತೆ ಬಿಜೆಪಿ ನಾಯಕರು ಪುಣೆಯಲ್ಲಿ ವ್ಯಾಪಕವಾಗಿ ಪ್ರಚಾರ ನಡೆಸಿದ್ದರು. ಆದರೆ ಆ ಕ್ಷೇತ್ರವೂ ಆಡಳಿತ ಪಕ್ಷದ ಪಾಲಾಗಿದೆ. ನಾವು ಆಡಳಿತ ಪಕ್ಷವನ್ನು ತಪ್ಪಾಗಿ ಅರಿತಿದ್ದೆವು. ಚುನಾವಣಾ ಫಲಿತಾಂಶ ನಾವಂದುಕೊಂಡಂತೆ ಬಂದಿಲ್ಲ ಎಂದು ಬಿಜೆಪಿ ನಾಯಕ ಫಡ್ನವೀಸ್​ ಹೇಳಿದ್ದಾರೆ. (ಏಜೆನ್ಸೀಸ್​)
3 ಕೋಟಿ ಖರ್ಚು ಮಾಡಿಸಿ ಮದ್ವೆಯಾದವ ಮೊದಲ ರಾತ್ರಿಯೇ ಫುಲ್ ಟೈಟ್! ಮುಂದೆ ಆಗಿದ್ದೆಲ್ಲವೂ…

ರಕ್ತದ ಮಡುವಿನಲ್ಲಿ ಬಿದ್ದು ಅಂಗಲಾಚುತ್ತಿದ್ದ ಮಂಜನ ಪ್ರಾಣ ಜನರ ಕಣ್ಣೆದುರೇ ಹೋಯ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − three =
Remember me
