ತಮಿಳುನಾಡು:ಭೀಕರ ಅಪಘಾತವೊಂದರಲ್ಲಿ ಕಾರೊಂದು ಫ್ಲೈಓವರ್​ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಮಿಳುನಾಡಿನ ಸೂಲಗಿರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೋಗುತ್ತಿತ್ತು. ಈ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಸೂಲಗಿರಿ ಸಮೀಪಿ ಕಾರು ಅಪಘಾತಕ್ಕೀಡಾಗಿತ್ತು.
ಸೂಲಗಿರಿ ಸಮೀಪ ಕಾರಿಗೆ ತಮಿಳುನಾಡು ಸರ್ಕಾರಿ ಬಸ್ ಡಿಕ್ಕಿ ಹೊಡೆದಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಫ್ಲೈಓವರ್​ನಿಂದ ಕೆಳಗಿನ ಹಳ್ಳವೊಂದಕ್ಕೆ ಬಿದ್ದಿದೆ. ಗಾಯಾಳುಗಳನ್ನು ಬೆಂಗಳೂರು ಹೊರವಲಯದ ಚಂದಾಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಮರದ ಕೆಳಗೆ ಸಿಲುಕಿ ಬೈಕ್ ಸವಾರ ಸಾವು; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..

ಮಬ್ಬು ಕವಿದ ಮಾರ್ಗ, 35 ಪ್ರಯಾಣಿಕರಿದ್ದ ಬಸ್​ ಪಲ್ಟಿ​!

ಮೋದಿ ನಡೆಯನ್ನು ಮೆಚ್ಚಿದ ಪಾಕಿಸ್ತಾನಿ ಪತ್ರಕರ್ತ; ಪಾಕ್ ಸರ್ಕಾರದ ವಿರುದ್ಧ ಅಸಮಾಧಾನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eighteen =
Remember me
