– ಜನರ ಜೀವದ ಜತೆ ಚೆಲ್ಲಾಟ ಆಡಬೇಡಿ– ವಿಶೇಷ ತಂಡ ರಚಿಸಿ ತನಿಖೆಗೆ ಸಿಎಂ ಆದೇಶ
ಬೆಂಗಳೂರು:ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತ್ತುಗೊಳಿಸಲಾಗವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್​​ ಎಚ್ಚರಿಕೆ ನೀಡಿದ್ದಾರೆ.
‘ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ವೇಳೆ ಮಾತನಾಡಿದ ಅವರು, ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡುತ್ತಾ ಇದೀರಿ?’ ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ.
‘ಜನರ ಜೀವದ ಜತೆ ಚೆಲ್ಲಾಟ ಆಡಬೇಡಿ. ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ವಿಶೇಷ ತಂಡ ರಚಿಸಿ ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆ ಆಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿ. ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡವನ್ನು ಕಳುಹಿಸಿ ತನಿಖೆ ನಡೆಸಲಾಗುವುದು. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.
ಮಗಳು ಬೇರೆ ಧರ್ಮದ ಹುಡುಗನನ್ನು ಮದುವೆಯಾಗಿದ್ದಕ್ಕೆ ಬದುಕಿದ್ದಾಗಲೇ ಪಿಂಡ ಪ್ರದಾನ ಮಾಡಿದ ಪೋಷಕರು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + twelve =
Remember me
