ಶ್ರೀನಗರ:2019ರ ಫೆಬ್ರುವರಿಯಲ್ಲಿ ನಡೆದಿದ್ದ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಸೇರಿ ಮೂವರು ಉಗ್ರರನ್ನು ಭದ್ರತಾ ಪಡೆ ಭಾನುವಾರ ಹೊಡೆದುರುಳಿಸಿದೆ.
ಮೃತ ಉಗ್ರರನ್ನು ಬುರಾನ್ ಶೇಖ್, ಅಬು ಉಸ್ಮಾನ್ ಮತ್ತು ಜೈಷ್​ನ ಕಮಾಂಡರ್ ಕ್ವಾರಿ ಯಾಸಿರ್ ಎಂದು ಗುರುತಿಸಲಾಗಿದೆ. 40 ಸಿಆರ್​ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯಲ್ಲಿ ಕ್ವಾರಿ ಯಾಸಿರ್ ಭಾಗಿಯಾಗಿದ್ದ ಎಂದು ಭದ್ರತಾ ಪಡೆಗಳು ತಿಳಿಸಿವೆ. ಪಾಕ್ ಮೂಲದವನಾದ ಯಾಸಿರ್, ಈ ಹಿಂದೆ ಲೆಥಪೋರಾ ಸ್ಫೋಟ ಸೇರಿ ಜಮ್ಮು- ಕಾಶ್ಮೀರದಲ್ಲಿ ಹಲವು ಪ್ರಮುಖ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಅವಂತಿಪೋರಾದ ತ್ರ್ರಾಲ್ ಪ್ರದೇಶದಲ್ಲಿ ಮೂವರು ಉಗ್ರರು ಅಡಗಿದ್ದ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ಮೂವರನ್ನೂ ಹೊಡೆದುರುಳಿಸಿವೆ. ಈ ಉಗ್ರರು ಗಣರಾಜ್ಯೋತ್ಸವ ವೇಳೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕಳೆದೊಂದು ವಾರದಲ್ಲಿ ಭದ್ರತಾ ಪಡೆಗಳು ಒಟ್ಟು 8 ಭಯೋತ್ಪಾದಕರನ್ನು ಹೊಡೆದುರುಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 16 =
Remember me
