ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ದೆಹಲಿ ಹೈಕೋರ್ಟ್​ ಮಂಗಳವಾರ ಮಧ್ಯರಾತ್ರಿ ವಿಚಾರಣೆ ನಡೆಸಿ ಜನರಿಗೆ ರಕ್ಷಣೆ ಒದಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿತು.
ಪೌರತ್ವ ಕಾಯ್ದೆ ತಿದ್ದುಪಡಿ ಜಾರಿ ವಿರೋಧಿಸಿ ಕಳೆದ ಭಾನುವಾರ ಜಾಫ್ರಬಾದ್​ನಲ್ಲಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಮಂಗಳವಾರ ರಾತ್ರಿ ವೇಳೆಗೆ 13 ಮಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್​ ಮಧ್ಯರಾತ್ರಿ ವಿಚಾರಣೆ ನಡೆಸಿ ಗಲಭೆಯಲ್ಲಿ ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸಿ ಜನರಿಗೆ ರಕ್ಷಣೆ ನೀಡುವಂತೆ ಆದೇಶಿಸಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಮೆಟ್ರೋ ರೈಲು ನಿಲ್ದಾಣಗಳನ್ನು ಬುಧವಾರ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ. (ಏಜೆನ್ಸೀಸ್​)
ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಕಂಡಲ್ಲಿ ಗುಂಡಿಕ್ಕಲು ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
